ಸಿಂಗಪುರ: ಏರ್ ಇಂಡಿಯಾ ಸಂಸ್ಥೆಯು ಮುಂದಿನ 18 ತಿಂಗಳ ಅವಧಿಯಲ್ಲಿ ಪ್ರತಿ ಆರು ದಿನಗಳಿಗೊಮ್ಮೆ ಹೊಸ ವಿಮಾನವನ್ನು ಸ್ವೀಕರಿಸಲು ಸಜ್ಜಾಗಿದೆ ಎಂದು ಕಂಪನಿಯ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಕ್ಯಾಂಪ್ಬೆಲ್ ವಿಲ್ಸನ್ ಶುಕ್ರವಾರ ಇಲ್ಲಿ ಹೇಳಿದ್ದಾರೆ.
ಏಷ್ಯಾ ಪೆಸಿಫಿಕ್ ಏರ್ಲೈನ್ಸ್ ಅಸೋಸಿಯೇಷನ್ ಅಧ್ಯಕ್ಷರ 67ನೇ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆಗೆ ಸೇವೆ ಸಲ್ಲಿಸಲು ವಿಮಾನಯಾನ ಸಂಸ್ಥೆಯು 470 ವಿಮಾನಗಳಿಗೆ ಬೇಡಿಕೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.