ಬದಿಯಡ್ಕ: ಪೆರಡಾಲ ನವಜೀವನ ಹೈಯರ್ ಸೆಕಂಡರಿ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ವಿಜ್ಞಾನೋತ್ಸವದ ಗಣಿತ ವಿಭಾಗದ ಗ್ರೂಪ್ ಪ್ರಾಜೆಕ್ಟ್ ಹೈಸ್ಕೂಲ್ ಮಟ್ಟದಲ್ಲಿ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಶಮಾ ವಿ.ಎಂ. ಹಾಗೂ ವೈಷ್ಣವಿ ಭಂಡಾರಿ ‘ಎ’ ಗ್ರೇಡ್‍ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ವ್ಯವಸ್ಥಾಪಕರು, ರಕ್ಷಕ ಶಿಕ್ಷಕ ಸಂಘ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದೆ.





