HEALTH TIPS

ಮಣಿಪುರ: ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಅಂತರ್ಜಾಲ ಸೇವೆ ನಿಷೇಧ ತೆರವು

                ಇಂಫಾಲ: ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಮಣಿಪುರದ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಅಂತರ್ಜಾಲ ಸೇವೆ ನಿಷೇಧವನ್ನು ಸರ್ಕಾರವು ತೆರವುಗೊಳಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

            ಪ್ರಯೋಗಾರ್ಥವಾಗಿ ನಾಗಾ ಬಹುಸಂಖ್ಯಾತ ಉಖ್ರುಲ್, ಸೇನಾಪತಿ, ಚಂಧೇಲ್ ಮತ್ತು ತಮೆಂಗ್‌ಲೊಂಗ್ ಜಿಲ್ಲಾ ಕೇಂದ್ರಗಳಲ್ಲಿ ಇಂಟರ್‌ನೆಟ್ ನಿಷೇಧ ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

             ಪ್ರಯೋಗಾರ್ಥವಾಗಿ ಮೊಬೈಲ್ ಟವರ್ ಕಾರ್ಯಗತಗೊಳಿಸುವಂತೆ ಮಣಿಪುರದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

                  ಹಿಂಸಾಚಾರ ಪೀಡಿತವಲ್ಲದ ಕಣಿವೆ ರಾಜ್ಯದ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಮರುಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                    ಮಣಿಪುರದಲ್ಲಿ ಮೇ 3ರಂದು ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಇಲ್ಲಿಯವರೆಗೆ 180ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries