HEALTH TIPS

ಉಗ್ರರ ವಿರುದ್ಧ ಕಾರ್ಯಾಚರಣೆ: ಸೇನೆಯ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರು ಹುತಾತ್ಮ

                  ಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಕ್ಯಾಪ್ಟನ್‌ಗಳು, ಹವಾಲ್ದಾರ್ ಮತ್ತು ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

                   ಸೇನೆಯ ಮೇಜರ್‌ ಮತ್ತು ಯೋಧರೊಬ್ಬರು ಗಾಯಗೊಂಡಿದ್ದು ಅವರನ್ನು ಉಧಂಪುರದ ಸೇನಾ ಕಮಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

                ಬಾಜಿಮಾಲ್‌ನ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನೆ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಆ ಪ್ರದೇಶದಲ್ಲಿ ಅವಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದಿವೆ.

             ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಇಬ್ಬರು ಉಗ್ರರು ಅರಣ್ಯದಲ್ಲಿ ಅವಿತಿರುವ ಸಾಧ್ಯತೆ ಇದ್ದು, ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ವಿವರಿಸಿವೆ.

                 'ಗುಪ್ತಚರ ಇಲಾಖೆಯ ಮಾಹಿತಿ ಅನ್ವಯ ಗುಲಬರ್ಗ್‌ ಅರಣ್ಯ ಪ್ರದೇಶದ ಕಾಲಕೋಟ್‌ನಲ್ಲಿ ಭಾನುವಾರದಿಂದಲೇ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು' ಎಂಧದು ಸೇನೆಯ 'ದಿ ವೈಟ್‌ ನೈಟ್‌ ಕೋರ್' ಎಕ್ಸ್‌ ವೇದಿಕೆಯಲ್ಲಿ ತಿಳಿಸಿದೆ.

                   ಅರಣ್ಯ ಪ್ರದೇಶದಲ್ಲಿ ಅವಿತುಕೊಂಡಿರುವ ಭಯೋತ್ಪಾದಕರು ಕೂಡ ಗಾಯಗೊಂಡಿದ್ದು, ಭದ್ರತಾ ಪಡೆಗಳು ಅವರಿರುವ ಪ್ರದೇಶವನ್ನು ಸುತ್ತುವರಿದಿವೆ ಎಂದಿದೆ.

ಜಮ್ಮುವಿನ ರಜೌರಿ-ಪೂಂಚ್‌ ಗಡಿ ಪ್ರದೇಶವು ಕಳೆದೆರಡು ವರ್ಷಗಳಿಂದ ಭಯೋತ್ಪಾದಕರ ಅಡಗುತಾಣಗಳಾಗುತ್ತಿವೆ ಎಂದು ಮೂಲಗಳು ಹೇಳಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries