ನವದೆಹಲಿ: ಮುಂದಿನ ಐದು ದಿನಗಳಲ್ಲಿ ದಕ್ಷಿಣ ಭಾರತದಾದ್ಯಂತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜತೆಗೆ ಕೇರಳದ ಇಡುಕ್ಕಿ, ಮಲಪ್ಪುರಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
0
samarasasudhi
ನವೆಂಬರ್ 07, 2023
ನವದೆಹಲಿ: ಮುಂದಿನ ಐದು ದಿನಗಳಲ್ಲಿ ದಕ್ಷಿಣ ಭಾರತದಾದ್ಯಂತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜತೆಗೆ ಕೇರಳದ ಇಡುಕ್ಕಿ, ಮಲಪ್ಪುರಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಚಂಡಮಾರುತದ ಪರಿಚಲನೆಯಿದ್ದು, ಅದು ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಕಡೆಗೆ ಚಲಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ, ರಾಜಧಾನಿ ಬೆಂಗಳೂರು,ದಕ್ಷಿಣ ಮತ್ತು ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 9ರವರೆಗೆ ನಾಲ್ಕು ದಿನ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.