HEALTH TIPS

ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ: ದೇಶದ ಜನರ ಸಂಭ್ರಮದ ಕ್ಷಣ ಎಂದ ಆರ್‌ಎಸ್‌ಎಸ್

             ವದೆಹಲಿ: ಮುಂದಿನ ವರ್ಷ ಜ. 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನೆ ದಿನವು ದೇಶದ ಜನರ ಪಾಲಿಗೆ ಅತ್ಯಂತ ಸಂತಸದ ಕ್ಷಣವಾಗಿರಲಿದೆ ಎಂದು ಅರ್‌ಎಸ್‌ಎಸ್‌ ಹೇಳಿದೆ. ಅಲ್ಲದೆ ಆ ದಿನವನ್ನು ಹಬ್ಬದಂತೆ ಆಚರಣೆ ಮಾಡಿ ಎಂದು ದೇಶದ ಜನರಿಗೆ ಕರೆ ನೀಡಿದೆ.

             ಗುಜರಾತ್‌ನ ಕಛ್‌ ಜಿಲ್ಲೆಯ ಭುಜ್‌ನಲ್ಲಿ ಈ ವಾರದ ಆರಂಭದಲ್ಲಿ ನಡೆದ ಆರ್‌ಎಸ್‌ಎಸ್‌ನ ರಾಷ್ಟ್ರೀಯ ಕಾರ್ಯನಿರ್ವಾಹಕ ಸಭೆಯಲ್ಲಿ, ರಾಮ ಮಂದಿರ ಉದ್ಘಾಟನೆ ಹಾಗೂ ಅದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಲಾಯಿತು.

              ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೂ ಮುನ್ನ ಜನವರಿ 1 ರಿಂದ 15ರ ವರೆಗೆ ಮನೆ ಮನೆಗೆ ತೆರಳಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಆಹ್ವಾನ ಪತ್ರಿಕೆ ನೀಡಲಿದ್ದಾರೆ ಎಂದು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ಹೇಳಿದ್ದಾರೆ.

               ನಮ್ಮ ಪೂಜ್ಯ ಶ್ರೀರಾಮನ ಭವ್ಯವಾದ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದು, ಜನವರಿ 22 ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ವಿದೇಶದಲ್ಲಿ ಇರುವವರು ಸೇರಿ ಇದು ನಮಗೆಲ್ಲಾ ಭಾರೀ ಸಂತೋಷದ ದಿನ. ಹಲವು ವರ್ಷಗಳ ಪ್ರಯತ್ನದ ಫಲವಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ದೇಶದಾದ್ಯಂತ ಜನರು ಈ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ ' ಎಂದು ಆರ್‌ಎಸ್‌ಎಸ್‌ನ ಪ್ರಚಾರ ಮುಖ್ಯಸ್ಥ ಸುನಿಲ್ ಅಂಬೆಕರ್ ತಿಳಿಸಿದ್ದಾರೆ.

                ನಮಗೆ ಅದೊಂದು ಹಬ್ಬದ ಕ್ಷಣ. ಎಲ್ಲರಿಗೂ ಆಯೋಧ್ಯೆಗೆ ಹೋಗಲು ಸಾಧ್ಯವಾಗುವುದಿಲ್ಲ. ಹತ್ತಿರದ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಸಂಭ್ರಮವನ್ನು ಆಚರಿಸಬೇಕು. ರಾತ್ರಿ, ಎಲ್ಲರೂ ಮನೆಯಲ್ಲಿ ದೀಪ ಬೆಳಗಿಸಬೇಕು. ಇದು ದೇಶದ ಪ್ರತಿಯೊಬ್ಬರಿಗೆ ಆರ್‌ಎಸ್‌ಎಸ್‌ ನೀಡುತ್ತಿರುವ ಕರೆ ಎಂದು ಅಂಬೆಕರ್ ಹೇಳಿದ್ದಾರೆ.

                 'ಪ್ರಭು ಶ್ರೀರಾಮ ಘನತೆ, ಪ್ರೀತಿ ಮತ್ತು ಧರ್ಮದ ಸಂಕೇತ. ಪ್ರತಿಷ್ಠಾಪನೆ ದಿನವನ್ನು ಹಬ್ಬದಂತೆ ಆಚರಿಸಿ. ಅದೊಂದು ಸೌಹಾರ್ದದ ಕ್ಷಣವಾಗಿರಲಿದೆ. ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಭಾರತವು ಪ್ರಗತಿಯ ಪಥದಲ್ಲಿ ತನ್ನ ನಡಿಗೆಯನ್ನು ಮುಂದುವರಿಸಲಿದೆ' ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries