ಗರಿಯಾಬಂದ್: ಛತ್ತೀಸಗಢದ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನದ ಸಂದರ್ಭ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್‌ನ(ಐಟಿಬಿಪಿ) ಯೋಧಯೊಬ್ಬರು ಹುತಾತ್ಮರಾಗಿದ್ದಾರೆ.
0
samarasasudhi
ನವೆಂಬರ್ 18, 2023
ಗರಿಯಾಬಂದ್: ಛತ್ತೀಸಗಢದ ವಿಧಾನಸಭೆ ಚುನಾವಣೆಯ 2ನೇ ಹಂತದ ಮತದಾನದ ಸಂದರ್ಭ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್‌ನ(ಐಟಿಬಿಪಿ) ಯೋಧಯೊಬ್ಬರು ಹುತಾತ್ಮರಾಗಿದ್ದಾರೆ.
ಐಟಿಬಿಪಿ ಬೆಂಗಾವಲು ಪಡೆ ಜೊತೆ ಮತದಾನದ ಕೆಲಸ ಮುಗಿಸಿ ಮತಗಟ್ಟೆ ಸಿಬ್ಬಂದಿ ಹಿಂದಿರುಗುತ್ತಿದ್ಧಾಗ ಬಡೆ ಗೋಬ್ರಾ ಹಳ್ಳಿ ಬಳಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಮೃತಪಟ್ಟ ಐಟಿಬಿಪಿ ಸಿಬ್ಬಂದಿಯನ್ನು ಹೆಡ್ ಕಾನ್‌ಸ್ಟೆಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಛತ್ತೀಸಗಢದ ಎರಡನೇ ಹಂತದ ಚುನಾವಣೆಯಲ್ಲಿ ಇಂದು ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ನವೆಂಬರ್ 7ರಂದು ಮೊದಲ ಹಂತದ ಚುನಾವಣೆ ನಡೆದಿತ್ತು.