HEALTH TIPS

ಮಹಾರಾಷ್ಟ್ರದಲ್ಲಿ ಲಘು ಭೂಕಂಪ: ಭಯಭೀತರಾದ ಜನ

                  ಮುಂಬೈ: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು (ಸೋಮವಾರ) ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

                 ಯಾವುದೇ ಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಬೆಳಿಗ್ಗೆ 5.09ರ ಸುಮಾರಿಗೆ ಭೂಮಿ ಕಂಪಿಸಿದೆ.

              5 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ಎನ್‌ಸಿಎಸ್ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದೆ.


              ಈಚೆಗೆ ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪ ಸಂಭವಿಸಿತ್ತು. ಹರಿಯಾಣದ ಫರಿದಾಬಾದ್‌ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿತ್ತು.

                       ತಿಂಗಳಲ್ಲಿ ದೆಹಲಿಯಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿತ್ತು. ಅ.3ರಂದು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಭೂಕಂಪನ ಸಂಭವಿಸಿತ್ತು. ಜನರು ಭಯಭೀತರಾಗಿ ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries