ರಾಯ್ಪುರ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದೆ. ಈ ನಡುವೆ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಓರ್ವ ಕೋಬ್ರಾ ಕಮಾಂಡೊ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ನವೆಂಬರ್ 07, 2023
ರಾಯ್ಪುರ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದೆ. ಈ ನಡುವೆ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಓರ್ವ ಕೋಬ್ರಾ ಕಮಾಂಡೊ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತದಾನದ ಸಂದರ್ಭದಲ್ಲಿ ಭದ್ರತೆಯನ್ನು ಏರ್ಪಡಿಸಲು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಯಕ್ಷನ್ (ಕೋಬ್ರಾ) 206ನೇ ತುಕಡಿಯ ಜಂಟಿ ತಂಡವು ಟೊಂಡಮಾರ್ಕ ಕ್ಯಾಂಪ್‌ನಿಂದ ಎಲ್ಮಗುಂಡ ಗ್ರಾಮದಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.