ಕಾಸರಗೋಡು: ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ವತಿಯಿಂದ ನಡೆಯಲಿರುವ ಕಾಸರಗೋಡು ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕೇರಳ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ವೀಣಾ ಜಾರ್ಜ್ ಕಾಸರಗೋಡಿನಲ್ಲಿ ಗುರುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಶಾಸಕ ಎನ್.ಎ ನೆಲ್ಲಿಕುನ್ನು, ಎ.ಆರ್ ಸುಬ್ಬಯ್ಯಕಟ್ಟೆ ಮೊದಲಾದವರು ಉಪಸ್ಥಿತರಿದ್ದರು. ಬಾಯಾರು ಪ್ರಶಾಂತಿ ವಇದ್ಯಾಲಯದಲ್ಲಿ ನ. 19ರಂದು ಕಾಸರಗೋಡು ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿರುವುದು.




