ತಿರುವನಂತಪುರಂ: ಸೆಕ್ರೆಟರಿಯೇಟ್ ಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಪೋಲೀಸ್ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶ ತಲುಪಿದೆ.
ನಂತರ ಪೋಲೀಸರು ಸೆಕ್ರೆಟರಿಯೇಟ್ ನಲ್ಲಿ ತಪಾಸಣೆ ಆರಂಭಿಸಿದರು. ಕಂಟೋನ್ಮೆಂಟ್ ಪೋಲೀಸರು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಬೆದರಿಕೆ ಸಂದೇಶ ಬಂದಿದೆ. ಪೊಜ್ಜಿಯೂರಿನಿಂದ ಸಂದೇಶ ಬಂದಿದೆ ಎಂದು ಪೋಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಬಾಂಬ್ ಸ್ಕ್ವಾಡ್ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಸಚಿವಾಲಯದ ಎಲ್ಲ ವಿಭಾಗಗಳಲ್ಲಿ ತಪಾಸಣೆ ನಡೆಸಲಾಗಿದೆ.




