ಭೋಪಾಲ್: ಹಿಮಾಚಲ ಪ್ರದೇಶ, ರಾಜಸ್ಥಾನ, ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳು ಪಕ್ಷದ ನಾಯಕ ರಾಹುಲ್ ಗಾಂಧಿ ಅವರಂತೆಯೇ ವೈಫಲ್ಯ ಕಂಡಿವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ವ್ಯಂಗ್ಯವಾಡಿದ್ದಾರೆ.
0
samarasasudhi
ನವೆಂಬರ್ 06, 2023
ಭೋಪಾಲ್: ಹಿಮಾಚಲ ಪ್ರದೇಶ, ರಾಜಸ್ಥಾನ, ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳು ಪಕ್ಷದ ನಾಯಕ ರಾಹುಲ್ ಗಾಂಧಿ ಅವರಂತೆಯೇ ವೈಫಲ್ಯ ಕಂಡಿವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ವ್ಯಂಗ್ಯವಾಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ.
'ಕಾಂಗ್ರೆಸ್ ಅಧಿಕಾರದಲ್ಲಿರುವ ಕರ್ನಾಟಕ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂತಹ ಭರವಸೆಗಳು ವಿಫಲವಾಗಿವೆ. ಹಿಮಾಚಲ ಪ್ರದೇಶದಲ್ಲಿ 22.50 ಲಕ್ಷ ಮಹಿಳೆಯರಿಗೆ ತಿಂಗಳಿಗೆ ₹1,500 ಕೊಡುವ ಭರವಸೆಯನ್ನು ಪಕ್ಷ ನೀಡಿತ್ತು. ಪಕ್ಷ ಅಧಿಕಾರಕ್ಕೆ ಬಂದು 10 ತಿಂಗಳು ಕಳೆದರೂ ಅದನ್ನು ಜಾರಿಗೆ ತಂದಿಲ್ಲ. ಒಂದು ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದರು. ಆದರೆ, ಈವರೆಗೆ 1,000 ಉದ್ಯೋಗಗಳನ್ನೂ ಸೃಷ್ಟಿಸಿಲ್ಲ' ಎಂದು ಅವರು ಹೇಳಿದ್ದಾರೆ. ರಾಜಸ್ಥಾನದಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ದೌರ್ಜನ್ಯಗಳು ನಡೆದಿವೆ ಎಂದು ಸಚಿವರು ಆರೋಪಿಸಿದ್ದಾರೆ.