ಕಾಸರಗೋಡು: ಜಿಲ್ಲೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಜಾರಿಗೊಳಿಸಲು ಆರಂಭಿಸಿದ ಕನೆಕ್ಟಿಂಗ್ ಕಾಸರಗೋಡು ಯೋಜನೆಯ ಅಂಗವಾಗಿ ಸಾರ್ವಜನಿಕರ ದೂರುಗಳನ್ನು ತಕ್ಷಣ ಪರಿಹರಿಸಲು ಜಿಲ್ಲಾಡಳಿತ 'ಡಿಸಿ ಕನೆಕ್ಟ್' ಕಾರ್ಯಕ್ರಮ ಆಯೋಜಿಸಿದೆ.
ಜಿಲ್ಲೆಯ ದೂರದ ಪ್ರದೇಶಗಳಿಂದ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲು ಬರುವ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಕ್ಷಯ ಕೇಂದ್ರಗಳ ನೆರವಿನೊಂದಿಗೆ ಈ ಯೋಜನೆ ಜಾರಿಗೊಳಿಸುತ್ತಿದೆ. ಸಾರ್ವಜನಿಕರಿಗೆ ಲಿಖಿತ ಅರ್ಜಿಗಳೊಂದಿಗೆ ಸಮೀಪದ ಅಕ್ಷಯ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅದಾಲತ್ ದಿನದಂದು ಸಾರ್ವಜನಿಕರಿಗೆ ಅಕ್ಷಯ ಕೇಂದ್ರದ ಮೂಲಕ ಜಿಲ್ಲಾಧಿಕಾರಿ ಜೊತೆ ಆನ್‍ಲೈನಾಗಿ (ವಿಡಿಯೋ ಕಾನ್ಫರೆನ್ಸ್) ಮಾತನಾಡಲು ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಯ ಮೂಲಕ ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.




