ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
0
samarasasudhi
ನವೆಂಬರ್ 16, 2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಸೇನೆಯ ಜಾಗೃತ ದಳದ ಸಿಬ್ಬಂದಿ ಎಲ್‌ಒಸಿ ಬಳಿ ಉಗ್ರರ ಚಲನವಲನವನ್ನು ಪತ್ತೆ ಮಾಡಿತ್ತು.
ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ತಿಳಿಸಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಉಗ್ರರ ಒಳನುಸುಳುವಿಕೆ ಯತ್ನ ಕಡಿಮೆಯಾಗಿದೆ. ಅಕ್ಟೋಬರ್ 26ರಂದು ಕುಪ್ವಾರ ಜಿಲ್ಲೆಯ ಮಚ್ಚಿಲ್ ಸೆಕ್ಟರ್‌ನಲ್ಲಿ ಎಲ್‌ಒಸಿ ಬಳಿ ಐವರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಅಕ್ಟೋಬರ್ 22ರಂದು ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಗಡಿ ಒಳಗೆ ನುಸುಳುವಿಕೆ ಯತ್ನ ವಿಫಲಗೊಳಿಸಿದ್ದ ಭದ್ರತಾ ಪಡೆ, ಇಬ್ಬರು ಉಗ್ರರನ್ನು ಕೊಂದಿತ್ತು.
ಜೂನ್‌ನಲ್ಲಿ ಒಟ್ಟು 11 ನುಸುಳುಕೋರರನ್ನು ಹೊಡೆದುರುಳಿಸಲಾಗಿತ್ತು. ಇದರಲ್ಲಿ ನಾಲ್ವರನ್ನು ಮಚ್ಚಿಲ್ ಸೆಕ್ಟರ್‌ನಲ್ಲಿ ಮತ್ತು ಐವರನ್ನು ಕೇರಾನ್ ಸೆಕ್ಟರ್‌ನ ಸಮೀಪದ ಜುಮಗುಂಡ್ ಪ್ರದೇಶದಲ್ಲಿ ಹತ್ಯೆ ಮಾಡಲಾಗಿತ್ತು.