HEALTH TIPS

Kerala blasts: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌; 54 ಕೇಸ್‌ ದಾಖಲು

               ತಿರುವನಂತಪುರ: ಕೊಚ್ಚಿಯ ಕಳಮಶ್ಶೇರಿಯಲ್ಲಿ ಕ್ರೈಸ್ತ ಸಮುದಾಯದವರ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಬಾಂಬ್‌ ಸ್ಟೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಇದುವರೆಗೆ 54 ಪ್ರಕರಣಗಳನ್ನು ದಾಖಸಿಕೊಳ್ಳಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

             'ಮಲಪ್ಪುರಂ ಜಿಲ್ಲೆಯಲ್ಲಿ 26 ಪ್ರಕರಣಗಳು ದಾಖಲಾಗಿದ್ದರೆ, ಎರ್ನಾಕುಲಂನಲ್ಲಿ 15 ಮತ್ತು ತಿರುವನಂತಪುರದಲ್ಲಿ 5 ಪ್ರಕರಣಗಳು ದಾಖಲಾಗಿವೆ. ತ್ರಿಶೂರ್ ನಗರ ಮತ್ತು ಕೊಟ್ಟಾಯಂನಲ್ಲಿ ತಲಾ 2, ಪತ್ತನಂತಿಟ್ಟ, ಅಲಪ್ಪುಳ, ಪಾಲಕ್ಕಾಡ್ ಮತ್ತು ಕೋಝಿಕ್ಕೋಡ್‌ನಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ' ಎಂದು ತಿಳಿಸಿದ್ದಾರೆ.

                 'ಕೋಮು ದ್ವೇಷವನ್ನು ಪ್ರಚೋದಿಸುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಬಳಸಲಾದ ಹಲವಾರು ನಕಲಿ ಪ್ರೊಫೈಲ್‌ಗಳನ್ನು ಗುರುತಿಸಿಲಾಗಿದೆ' ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

                 'ನಕಲಿ ಪ್ರೊಫೈಲ್‌ಗಳ ಐಪಿ ವಿಳಾಸಗಳನ್ನು ಗುರುತಿಸಲು ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಎಕ್ಸ್, ವಾಟ್ಸಾಪ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಮನವಿ ಮಾಡಲಾಗಿದೆ. ಕೋಮು ದ್ವೇಷ ಹರಡದಂತೆ ತಡೆಗಟ್ಟಲು ಸೈಬರ್‌ ಇಲಾಖೆ 24 ಗಂಟೆ ಕಾರ್ಯಪ್ರವೃತ್ತವಾಗಿದೆ' ಎಂದು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries