ನವದೆಹಲಿ: ಪಂಜಾಬ್‌ನಲ್ಲಿ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ರಾಷ್ಟ್ರ ರಾಜಧಾನಿಗೆ ಮರಳಿದ್ದಾರೆ.
0
samarasasudhi
ಡಿಸೆಂಬರ್ 30, 2023
ನವದೆಹಲಿ: ಪಂಜಾಬ್‌ನಲ್ಲಿ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ರಾಷ್ಟ್ರ ರಾಜಧಾನಿಗೆ ಮರಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣದ ಜೊತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ.
ಮೂರನೇ ಬಾರಿಗೆ ಇ.ಡಿ ಸಮನ್ಸ್ ಜಾರಿ ಮಾಡಿದೆ. ಈ ಮೊದಲು ನವೆಂಬರ್ 02 ಹಾಗೂ ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ನೀಡಲಾಗಿತ್ತು. ಆದರೆ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಮೂಲಗಳು ತಿಳಿಸಿವೆ.