ಮಂಜೇಶ್ವರ: ಮತದಾರರ ಪಟ್ಟಿ ನವೀಕರಣ,ಶುದ್ದೀಕರಣದ ಅಂಗವಾಗಿ ಡಿ.17ರಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿವಿಧ ಬೂತ್ ಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಏಜೆಂಟರ ಸಮ್ಮುಖದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ತಿಳಿಸಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಬೂತ್‍ಗಳಲ್ಲಿ ಮತದಾರರ ಪಟ್ಟಿ ಶುದ್ಧೀಕರಣದ ಮೌಲ್ಯಮಾಪನ ನಡೆಯಲಿದೆ. ಮತದಾರರ ಪಟ್ಟಿಯನ್ನು ಶುಚಿಗೊಳಿಸುವ ಮೂಲಕ ಮತದಾರರ ಪಟ್ಟಿಯನ್ನು ನವೀಕರಿಸುವ ಕಾರ್ಯಕ್ಕೆ ಸಹಕರಿಸಬೇಕು ಹಾಗೂ ಮತದಾನದ ಪ್ರಮಾಣ ಹೆಚ್ಚಿಸುವ ಮೂಲಕ ಹೆಚ್ಚಿನ ಜನರನ್ನು ಚುನಾವಣೆಯ ಭಾಗವಾಗಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಂ.ಕುಂಞಂಬು ನಂಬಿಯಾರ್, ವಿ.ರಾಜನ್, ಎಂ.ವಿ.ಶಿಲ್ಪರಾಜ್, ಎ.ರವೀಂದ್ರನ್, ಚುನಾವಣಾ ಅಪರ ಜಿಲ್ಲಾಧಿಕಾರಿ ಕೆ.ಅಜೇಶ್, ಸ್ವೀಪ್ ನೋಡಲ್ ಅಧಿಕಾರಿ ಟಿ.ಟಿ.ಸುರೇಂದ್ರನ್ ಉಪಸ್ಥಿತರಿದ್ದರು.




.jpg)
