ಕಾಸರಗೋಡು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ)ಕೇರಳ ರಾಜ್ಯ ಘಟಕ ಇದರ ನೇತೃತ್ವದಲ್ಲಿ ಕಾಸರಗೋಡಿನಲ್ಲಿ ಒಂದು ದಿನದ ಕಾಸರಗೋಡು ಜಿಲ್ಲಾ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2024 ಜನವರಿ ಫೆಬ್ರವರಿ ತಿಂಗಳಿನಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಕಾಸರಗೋಡು ಜಿಲ್ಲೆಯ ಎಲ್ಲಾ ಕನ್ನಡ ಶಾಲೆಯಲ್ಲಿ, ಮಕ್ಕಳ ಸಾಹಿತ್ಯದ ಚಟುವಟಿಕೆಗಳಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಪ್ರತಿನಿಧಿಗಳನ್ನು ಆಮಂತ್ರಿಸಿ ಕಾಸರಗೋಡು ಜಿಲ್ಲಾ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಲಾಗುವುದು. ಕಾಸರಗೋಡು ಜಿಲ್ಲೆಯ ಪ್ರತಿಭಾವಂತ ಕನ್ನಡ ಶಾಲಾ ವಿದ್ಯಾರ್ಥಿಯನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗುವುದು. ವಿವಿಧ ಗೋಷ್ಠಿಯ ಅಧ್ಯಕ್ಷತೆಯನ್ನು ಕನ್ನಡ ವಿದ್ಯಾರ್ಥಿಗಳೇ ವಹಿಸಲಿದ್ದಾರೆ. ಮಕ್ಕಳ ಕವಿಗೋಷ್ಠಿ, ಮಕ್ಕಳ ಚಿತ್ರಕಲಾ ಗೋಷ್ಠಿ,ಮಕ್ಕಳ ಸಾಹಿತ್ಯಗೋಷ್ಠಿ ಹಾಗೂ ಮಕ್ಕಳ ಸಾಹಿತ್ಯ ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡಿರುವ ಅಧ್ಯಾಪಕರು, ಸಾಹಿತಿಗಳು,ಕವಿಗಳು, ಲೇಖಕರು, ಮಾಧ್ಯಮದವರು ಕಲಾವಿದರು ವಿವಿಧ ಗೋಷ್ಠಿಯ ಸಮನ್ವಯಕಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಮ್ಮೇಳನದ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರು ಭಾಗವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು(ರಿ )ಕೇರಳ ರಾಜ್ಯ ಘಟಕದ ಮುಂದಿನ ಕಾಯಕಾರಿ ಸಮಿತಿ ಯಾ ವಿಶೇಷ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಗುವುದು. ಪ್ರತಿಯೊಂದು ಶಾಲೆಯಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ತಲಾ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಲು ಅವಕಾಶ ನೀಡಲಾಗುವುದು. ಸಮ್ಮೇಳನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳನ್ನು ಗುರುತಿಸಿ, ಆಯಾ ಶಾಲೆಯ ಅಧ್ಯಾಪಕರು ವಿದ್ಯಾರ್ಥಿಗಳ ಹೆಸರು ವಿಳಾಸವನ್ನು ಕಳುಹಿಸಲು ಸೂಚಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ವಾಟ್ಸಪ್ ಬಳಗವನ್ನು ಪ್ರಾರಂಭಿಸಲಾಗಿದೆ. ಕಾಸರಗೋಡು ಜಿಲ್ಲಾ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ ಇದರ ಯಶಸ್ವಿಗೆ ವಿವಿಧ ಸಂಘ ಸಂಸ್ಥೆಗಳು, ಮಠ, ಆಶ್ರಮ, ದೇವಸ್ಥಾನಗಳು ಪ್ರಾಯೋಜಕರಾಗಿ ಸಹಕರಿಸಲು ಈಗಾಘಲೇ ಮುಮದೆ ಬಂದಿದ್ದಾರೆ.
ಕಾಸರಗೋಡು ಜಿಲ್ಲಾ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ, ವಿವಿಧ ಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಪಟ್ಟಿಯನ್ನು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಅಥವಾ ಅವರಿಂದ ನಿರ್ದೇಶಿ ಸಲ್ಪಟ್ಟ ಅಧ್ಯಾಪಕರು ವಿದ್ಯಾರ್ಥಿಗಳ ಹೆಸರು,ತಂದೆ ಯಾ ತಾಯಿಯ ಹೆಸರು, ವಿಳಾಸ ಜನ್ಮ ದಿನಾಂಕ,ತಿಂಗಳು,ವರ್ಷ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಮಾಹಿತಿಯನ್ನು ಸಂಗ್ರಹಿಸಿ ಕಳುಹಿಸಲು ವಿನಂತಿಸಲಾಗಿದೆ.
ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು(ರಿ ), ಕೇರಳ ರಾಜ್ಯ ಘಟಕ 'ಕನ್ನಡ ಗ್ರಾಮ' ಕನ್ನಡ ಗ್ರಾಮ ರಸ್ತೆ ಕಾಸರಗೋಡು -671121 ಮೊಬೈಲ್: 9448572016 ಎಂಬ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.


