HEALTH TIPS

2024ರಲ್ಲಿ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರುವ ನಿರೀಕ್ಷೆ- BJP ಮುಖಂಡರು

               ವದೆಹಲಿ: 2014ರಿಂದ 2023ರವರೆಗೂ ಎಲ್ಲಾ ಉತ್ತಮ ವರ್ಷಗಳನ್ನೇ ಕಳೆದ ಬಿಜೆಪಿ, ಬರಲಿರುವ ಹೊಸ ವರ್ಷವೂ ಆಶಾದಾಯಕವಾಗಿರಲಿದೆ ಎಂದಿದ್ದು, ಮೂರನೇ ಬಾರಿಗೂ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.

               ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮತ್ತು ಜ. 22ರಂದು ಅದರ ಪ್ರಾಣ ಪ್ರತಿಷ್ಠೆ, ಏಕರೂಪ ನಾಗರಿಕ ಸಂಹಿತೆಯನ್ನು ಚುನಾವಣೆಗೂ ಮೊದಲು ಕನಿಷ್ಠ 2 ರಾಜ್ಯಗಳಲ್ಲಿ ಜಾರಿಗೊಳಿಸುವುದು ಸೇರಿದಂತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಹಲವು ವಿಷಯಗಳಲ್ಲಿ ಯಶಸ್ಸು ಸಾಧಿಸಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

                ಜತೆಗೆ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವುದು ಪಕ್ಷದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. 2019ರಲ್ಲಿ 303 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ, 2024ರಲ್ಲಿ ಅದನ್ನು ಹೇಗೆ ಇನ್ನಷ್ಟು ಉತ್ತಮಪಡಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದಿದ್ದಾರೆ.

                    2024ರ ಚುನಾವಣೆಯಲ್ಲಿ ಬಿಜೆಪಿ 350 ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಕ್ಷದ ಹಲವು ಹಿರಿಯ ನಾಯಕರು ಹೇಳುತ್ತಿದ್ದಾರೆ. ಮತ್ತೊಂದೆಡೆ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟ ಕಳೆದ ಜುಲೈನಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಅದಕ್ಕೆ ಒಂದು ಉದ್ದೇಶ ಮತ್ತು ನಾಯಕರು ಯಾರು ಎಂಬುದೇ ಗೊತ್ತಿಲ್ಲ ಎಂದೂ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

                 ಮೋದಿ ಎಂಬ ಬ್ರಾಂಡ್‌ ಅನ್ನು ಇನ್ನಷ್ಟು ಬಲಿಷ್ಠಗೊಳಿಸುವ ವರ್ಷ 2023 ಆಗಿದ್ದು, ಉತ್ತರ ಭಾರತದಲ್ಲಿ ಪಂಜಾಬ್, ದೆಹಲಿ ಹಾಗೂ ಹಿಮಾಚಲ ಪ್ರದೇಶ ಹೊರತುಪಡಿಸಿ ಇತರೆಡೆ ಬಿಜೆಪಿ ಅಧಿಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಢ ವಿಧಾನಸಭೆಯಲ್ಲಿ ಉತ್ತಮ ಸಾಧನೆ ಮೂಲಕ ವಾಯವ್ಯ ಭಾರತದಲ್ಲಿ ತನ್ನ ಹಿಡಿತ ಮುಂದುವರಿಸಿರುವುದು ಲೋಕಸಭಾ ಚುನಾವಣೆಗೆ ನೆರವಾಗಲಿದೆ ಎಂದು ಮುಖಂಡರು ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಭಾರತದ ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸೇರಿ ಒಟ್ಟು 258 ಸ್ಥಾನಗಳಲ್ಲಿ ಬಿಜೆಪಿ 200 ಗೆದ್ದುಕೊಂಡಿತ್ತು. ಛತ್ತೀಸಗಢದಲ್ಲಿ ಗೆದ್ದ ನಂತರ ಹಿಂದಿ ಭಾಷಿಕ ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪಕ್ಷ ಯೋಜನೆ ರೂಪಿಸುತ್ತಿದೆ. ಈ ಭಾಗದಲ್ಲಿ ಹೆಚ್ಚಿನ ರೋಡ್‌ ಶೋಗಳನ್ನು ನಡೆಸಲು ಚಿಂತನೆ ಇದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

               ಮಹಾರಾಷ್ಟ್ರದಲ್ಲಿ 48 ಕ್ಷೇತ್ರಗಳಿದ್ದು, ಇದು ಪಕ್ಷಕ್ಕೆ ಸವಾಲಾಗಿದೆ. ಆದರೆ ಮೋದಿ ಅವರನ್ನು ವ್ಯಾಪಕವಾಗಿ ಜನರು ಒಪ್ಪಿಕೊಂಡಿರುವುದರಿಂದ ಪಕ್ಷಕ್ಕೆ ಹೆಚ್ಚಿನ ಬಲ ಸಿಗಲಿದೆ ಎಂದಿದ್ದಾರೆ.

ಬಹುತೇಕ ರಾಜ್ಯಗಳಲ್ಲಿ ಬಿಜೆಪಿಗೆ ಕಾಂಗ್ರೆಸ್ ಪ್ರತಿಸ್ಪರ್ಧಿಯಾಗಿದೆ. ಕರ್ನಾಟಕ ಮತ್ತು ತೆಲಂಗಾಣದ ವಿಧಾನಸಭಾ ಚುನಾವಣೆಯು ಪಕ್ಷಕ್ಕೆ ಸವಾಲಾಗಿದೆ. ಐದು ರಾಜ್ಯಗಳ ಚುನಾವಣೆಯಲ್ಲಿ ಹಲವು ಕೇಂದ್ರ ಸಚಿವರನ್ನೇ ಕಣಕ್ಕಿಳಿಸುವ ಮೂಲಕ ಪಕ್ಷ ಅಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಜತೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಪರಿಚಯಿಸುವ ಮೂಲಕ ಬಿಜೆಪಿ ಹೊಸ ಸಂದೇಶವನ್ನು ತನ್ನ ಕಾರ್ಯಕರ್ತರಿಗೆ ರವಾನಿಸಿದೆ. ಇದು ಫಲ ನೀಡಲಿದೆ ಎಂದು ವಿಶ್ವಾಸ ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.

             ಜಾತಿ ಗಣತಿ ವಿಷಯವನ್ನು ಕಾಂಗ್ರೆಸ್ ಮುನ್ನೆಲೆಗೆ ತಂದಿದೆ. ಇದು ಕೇಂದ್ರ ವಿಷಯವಾಗದೆ, ಆಯಾ ರಾಜ್ಯಗಳ ವಿಷಯವಾಗಿ ವಿವಾದ ತಣಿದಿದೆ. 2019ರಲ್ಲಿ ಲೋಕಸಭಾ ಚುನಾವಣೆಯನ್ನು ಮಾರ್ಚ್ 10ರಂದು ಚುನಾವಣಾ ಆಯೋಗ ಘೋಷಿಸಿತ್ತು. ಅದೇ ದಿನಾಂಕಕ್ಕೆ ಹೋಲಿಸಿದರೂ ಇನ್ನೂ ಹತ್ತು ವಾರಗಳ ಕಾಲಾವಕಾಶವಿದೆ. ಹಿಂದಿನ ಚುನಾವಣೆಗಿಂತ ಹೆಚ್ಚು ಕೆಲಸ ಮಾಡುವ ಸವಾಲು ಎದುರಿಗಿದೆ ಎಂದಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries