HEALTH TIPS

2024ರಲ್ಲೂ ಇದೇ ಉತ್ಸಾಹದೊಂದಿಗೆ ಮುನ್ನುಗ್ಗೋಣ: ಪ್ರಧಾನಿ ನರೇಂದ್ರ ಮೋದಿ

               ವದೆಹಲಿ: 'ವಿಕಸಿತ ಭಾರತ' ಕಾರ್ಯಕ್ರಮ ಸೇರಿದಂತೆ ದೇಶವು ಅಭಿವೃದ್ದಿಯತ್ತ ಸಾಗುತ್ತಿದೆ. ಸ್ವಾವಲಂಬನೆ ಮನೋಭಾವದಿಂದ ಮುನ್ನಡೆಯುತ್ತಿರುವ ಭಾರತ, ಇದೇ ಉತ್ಸಾಹವನ್ನು 2024ರಲ್ಲಿಯೂ ಮುಂದುವರಿಸಿಕೊಂಡು ಹೋಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

            2023ರ ತಮ್ಮ ಕೊನೆಯ ಮನ್ ಕಿ ಬಾತ್ (108ನೇ ಸಂಚಿಕೆ) ಭಾಷಣದಲ್ಲಿ ಅವರು ಮಾತನಾಡಿದರು.

                ದೇಶವು 'ನಾವೀನ್ಯತೆಯ ಕೇಂದ್ರ ಬಿಂದುವಾಗಿ ಹೊರಹೊಮ್ಮುತ್ತಿದೆ. ಇದು ಹೊಸತವನ್ನು ಅನ್ವೇಷಿಸುತ್ತಿರುವ ಭಾರತವನ್ನು ಸಂಕೇತಿಸುತ್ತದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಬೇಕು. ಈ ಮೂಲಕ 'ಫಿಟ್‌ ಇಂಡಿಯಾ' ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸಬೇಕು' ಎಂದು ಮೋದಿ ತಿಳಿಸಿದ್ದಾರೆ.

                ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಸೇರಿದಂತೆ ಭಾರತವು ಈ ವರ್ಷ ಹಲವು ಸಾಧನೆಗಳನ್ನು ಮಾಡಿದೆ ಎಂದು ಉಲ್ಲೇಖಿಸಿದರು.

               ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್, ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರು ತಮ್ಮ ಫಿಟ್‌ನೆಸ್‌ ಸಲಹೆಗಳನ್ನು ಹಂಚಿಕೊಂಡರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries