HEALTH TIPS

'ವಿಕಸಿತ್ ಭಾರತ್ @2047: ವಾಯ್ಸ್ ಆಫ್ ಯೂತ್‌'ಗೆ ನಾಳೆ ಪ್ರಧಾನಿ ಮೋದಿ ಚಾಲನೆ

               ವದೆಹಲಿ: 'ವಿಕಸಿತ್ ಭಾರತ್ @2047: ವಾಯ್ಸ್ ಆಫ್ ಯೂತ್‌'ಗೆ ನಾಳೆ (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಚಾಲನೆ ನೀಡಲಿದ್ದಾರೆ.

            ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಕುಲಪತಿಗಳು, ಸಂಸ್ಥೆಗಳ ಮುಖ್ಯಸ್ಥರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

             ದೇಶಕ್ಕಾಗಿ ರಾಷ್ಟ್ರೀಯ ಯೋಜನೆಗಳು, ಆದ್ಯತೆಗಳು ಮತ್ತು ಗುರಿಗಳ ರಚನೆಯಲ್ಲಿ ಯುವ ಪೀಳಿಗೆಯನ್ನು ಸಕ್ರಿಯವಾಗಿ ತೊಡಗಿಸುವುದು ಮೋದಿಯವರ ಉದ್ದೇಶವಾಗಿದೆ ಎಂದು ಪಿಎಂಒ ಹೇಳಿದೆ.

               'ವಿಕಸಿತ್ ಭಾರತ್ @2047: ವಾಯ್ಸ್ ಆಫ್ ಯೂತ್‌' ಉಪಕ್ರಮವು ದೇಶದ ಯುವಕರಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ. ಅಲ್ಲದೆ, ಕಾರ್ಯಾಗಾರಗಳು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಲು ಯುವಕರನ್ನು ತೊಡಗಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ಪಿಎಂಒ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries