HEALTH TIPS

ರೂಮ್ ಹೀಟರ್‌ನಿಂದ ಬೆಂಕಿ ಅವಘಡ: ತಂದೆ, 3 ತಿಂಗಳ ಮಗಳು ಸಜೀವ ದಹನ

           ಜೈಪುರಕೋಣೆಯಲ್ಲಿ ಅಳವಡಿಸಿದ್ದ ಹೀಟರ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಈ ವೇಳೆ ತಂದೆ ಹಾಗೂ 3 ತಿಂಗಳ ಮಗು ಸಜೀವ ದಹನಗೊಂಡಿರುವ ಘಟನೆ ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

          ಬೆಂಕಿ ಅವಘಡದಲ್ಲಿ ದೀಪಕ್‌ ಯಾದವ್‌ ಹಾಗೂ ಅವರ ಮೂರು ತಿಂಗಳ ಮಗಳು ನಿಶಿಕಾ ಸಜೀವ ದಹನಗೊಂಡಿದ್ದು, ಯಾದವ್‌ ಪತ್ನಿ ಸಂಜು ಅವರಿಗೆ ಸುಟ್ಟ ಗಾಯಗಳಾಗಿವೆ.

                ಸಂತ್ರಸ್ತರ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಸಂಜು ಅವರನ್ನೂ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೀಪಕ್‌ ಯಾದವ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries