ನವದೆಹಲಿ: ಜಲಶಕ್ತಿ ಯೋಜನೆ ಅಡಿ ದೇಶದಾದ್ಯಂತ ಗ್ರಾಮೀಣ ಪ್ರದೇಶದ ಶೇ 71 ಮನೆಗಳಿಗೆ ನಲ್ಲಿ ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದು ರಾಜ್ಯಸಭೆಗೆ ಸೋಮವಾರ ಲಿಖಿತ ಉತ್ತರದ ಮೂಲಕ ತಿಳಿಸಲಾಯಿತು.
0
samarasasudhi
ಡಿಸೆಂಬರ್ 05, 2023
ನವದೆಹಲಿ: ಜಲಶಕ್ತಿ ಯೋಜನೆ ಅಡಿ ದೇಶದಾದ್ಯಂತ ಗ್ರಾಮೀಣ ಪ್ರದೇಶದ ಶೇ 71 ಮನೆಗಳಿಗೆ ನಲ್ಲಿ ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದು ರಾಜ್ಯಸಭೆಗೆ ಸೋಮವಾರ ಲಿಖಿತ ಉತ್ತರದ ಮೂಲಕ ತಿಳಿಸಲಾಯಿತು.
ಸೆಪ್ಟೆಂಬರ್ 30ಕ್ಕೆ ಅನ್ವಯಿಸಿ, ಗ್ರಾಮೀಣ ಪ್ರದೇಶಗಳ ಪ್ರತಿ ಮನೆಗಳಿಗೂ ನಲ್ಲಿ ನೀರಿನ ಸೌಕರ್ಯ ಕಲ್ಪಿಸಲಾಗಿದೆ ಎಂದು ಒಂಬತ್ತು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ವರದಿ ನೀಡಿವೆ.
ನವೆಂಬರ್ 29ಕ್ಕೆ ಅನ್ವಯಿಸಿ, ದೇಶದ 19.24 ಕೋಟಿ ಗ್ರಾಮೀಣ ಕುಟುಂಬಗಳ ಪೈಕಿ, ಸುಮಾರು 13.69 ಕೋಟಿ ಕುಟುಂಬಗಳು ನಲ್ಲಿ ನೀರಿನ ಸೌಕರ್ಯ ಪಡೆದಿವೆ.
10.46 ಕೋಟಿ ಹೆಚ್ಚುವರಿ ನಲ್ಲಿ ನೀರಿನ ಸೌಕರ್ಯಗಳನ್ನು ಗ್ರಾಮೀಣ ಪ್ರದೇಶಗಳ ಕುಟುಂಬಗಳಿಗೆ ಒದಗಿಸಲಾಗುವುದು ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವರದಿ ನೀಡಿವೆ ಎಂದರು.
2019ರ ಆಗಸ್ಟ್ 15ರಂದು ಜಲ ಜೀವನ್ ಮಿಷನ್ ಘೋಷಿಸುವ ವೇಳೆ ಗ್ರಾಮೀಣ ಪ್ರದೇಶದಲ್ಲಿ ಶೇ 17 ಮನೆಗಳಿಗೆ ಮಾತ್ರ ನಲ್ಲಿ ನೀರಿನ ಸೌಕರ್ಯವಿತ್ತು ಎಂದು ತಿಳಿಸಿದರು.