HEALTH TIPS

ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ಶೇ.74 ರಷ್ಟು ಫಲಪ್ರದ ಎಂದ ಸ್ಪೀಕರ್ ಓಂ ಬಿರ್ಲಾ

          ನವದೆಹಲಿ: ನಿಗದಿಗಿಂತ ಒಂದು ದಿನ ಮುಂಚಿತವಾಗಿಯೇ ಸಂಸತ್ ಚಳಿಗಾಲದ ಅಧಿವೇಶನಕ್ಕೆ ಗುರುವಾರ ತೆರೆ ಬಿದ್ದಿದೆ. ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಚಳಿಗಾಲದ ಅಧಿವೇಶನ ಶೇಕಡಾ 74 ರಷ್ಟು ಫಲಪ್ರದವಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಹೇಳಿದ್ದಾರೆ.

            ಸದನವು 14 ಸಭೆಗಳನ್ನು ನಡೆಸಿದೆ ಮತ್ತು 61 ಗಂಟೆ 50 ನಿಮಿಷಗಳ ಕಾಲ ಕಲಾಪ ನಡೆದಿದೆ ಎಂದು ಬಿರ್ಲಾ ತಮ್ಮ ಸಮಾರೋಪ ಭಾಷಣದಲ್ಲಿ ತಿಳಿಸಿದ್ದಾರೆ.

             ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ(ದ್ವಿತೀಯ) ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ(ದ್ವಿತೀಯ) ಸಂಹಿತೆ ಸೇರಿದಂತೆ ಒಟ್ಟು 18 ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ.

              ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಮಸೂದೆಗಳಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ, 2023 ಮತ್ತು ದೂರಸಂಪರ್ಕ ಮಸೂದೆ, 2023 ಕೂಡ ಸೇರಿವೆ.

               ಅಧಿವೇಶನದಲ್ಲಿ 55 ಸ್ಟಾರ್ ಪ್ರಶ್ನೆಗಳಿಗೆ ಮೌಖಿಕವಾಗಿ ಉತ್ತರಿಸಲಾಗಿದೆ ಎಂದು ಬಿರ್ಲಾ ತಿಳಿಸಿದ್ದಾರೆ.

                "ನಿಯಮ 377 ರ ಅಡಿಯಲ್ಲಿ ಒಟ್ಟು 265 ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಗಿದೆ" ಎಂದು ಅವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries