HEALTH TIPS

ಭಾರತದಲ್ಲಿ 797 ಹೊಸ ಕೋವಿಡ್ ಪ್ರಕರಣಗಳು ಪತ್ತೆ

               ವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಇದು 225 ದಿನಗಳಲ್ಲಿ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

                  ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ.

                 ಕೇರಳದಲ್ಲಿ ಇಬ್ಬರು, ಮಹಾರಾಷ್ಟ್ರ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಸೇರಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

              ಮೇ 19ರಂದು ದೇಶದಲ್ಲಿ 865 ಹೊಸ ಪ್ರಕರಣಗಳು ದಾಖಲಾಗಿದ್ದವು. ಅಲ್ಲಿಂದ ಡಿಸೆಂಬರ್ 5 ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗಳಿಗೆ ಇಳಿದಿತ್ತು. ಆದರೆ ಈಗ ಮತ್ತೆ ಹೆಚ್ಚಿವೆ.

              ಕೋವಿಡ್‌ ಆರಂಭವಾದಾಗಿನಿಂದ ಸುಮಾರು 4 ವರ್ಷಗಳಲ್ಲಿ ದೇಶಾದ್ಯಂತ 4.5 ಕೋಟಿಗೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿದೆ. 5.3 ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

               ಸೋಂಕಿನಿಂದ 4.4 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಚೇತರಿಕೆ ದರ 98.81 ಪ್ರತಿಶತದಷ್ಟಿದೆ. ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries