HEALTH TIPS

ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣ: ಲಲಿತ್ ಝಾ ಗೆ 7 ದಿನಗಳ ಪೊಲೀಸ್ ಕಸ್ಟಡಿ

               ನವದೆಹಲಿ: ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಲಲಿತ್ ಝಾಗೆ 7 ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

               ಗುರುವಾರದಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ನಾಲ್ವರು ಆರೋಪಿಗಳನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ನ 7 ದಿನಗಳ ಕಸ್ಟಡಿಗೆ ಕಳಿಸಲಾಗಿತ್ತು. 

                ಬುಧವಾರ (ಡಿ.13 ರಂದು) 2001 ರ ಸಂಸತ್ ಭಯೋತ್ಪಾದನೆ ದಾಳಿಯ ವಾರ್ಷಿಕ ನೆನಪಿನ ದಿನದಂದೇ, ಸಾಗರ್ ಶರ್ಮಾ, ಮನೋರಂಜನ್ ಡಿ ವೀಕ್ಷಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ ಗೆ ನುಗ್ಗಿ ಯೆಲ್ಲೋ ಗ್ಯಾಸ್ ನ್ನು ಬಿಡುಗಡೆ ಮಾಡಿ ಘೋಷಣೆ ಕೂಗಿದ್ದರು.

                 ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಲಲಿತ್ ಝಾ ಅವರನ್ನು ದೆಹಲಿ ನ್ಯಾಯಾಲಯ ಈಗ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries