HEALTH TIPS

ಜ್ಞಾನವಾಪಿ ಮಸೀದಿ ಸಮೀಕ್ಷೆ: ಸರ್ವೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ASI

              ವಾರಾಣಸಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೆ ಕಾರ್ಯ ಪೂರ್ಣಗೊಳಿಸಿರುವ ಭಾರತೀಯ ಪುರಾತತ್ವ ಇಲಾಖೆಯು (ಎಎಸ್‌ಐ), ತನ್ನ ವರದಿಯನ್ನು ವಿಚಾರಣೆ ನಡೆಯುತ್ತಿರುವ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಿದೆ. ಈ ಪ್ರಕರಣ ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

              ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ಅವರು ಈ ಕುರಿತು ಮಾಹಿತಿ ನೀಡಿ, 'ಎಎಸ್‌ಐ ಸ್ಥಾಯಿ ಸಮಿತಿಯ ಅಮಿತ್ ಶ್ರೀವಾಸ್ತವ ಅವರು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತಮ್ಮ ವರದಿಯನ್ನು ಸಲ್ಲಿಸಿದ್ದಾರೆ' ಎಂದು ಹೇಳಿದ್ದಾರೆ.

            'ವರದಿ ಸಲ್ಲಿಸಿದ ಸಂದರ್ಭದಲ್ಲಿ ಎಎಸ್‌ಐನ ನಾಲ್ವರು ಹಿರಿಯ ಅಧಿಕಾರಿಗಳು ಇದ್ದರು. ಡಿ. 21ರಂದು ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿ ಲಕೋಟೆಯನ್ನು ತೆರೆದು ಎರಡೂ ಕಡೆಯವರಿಗೆ ಅದರ ಪ್ರತಿಯನ್ನು ನ್ಯಾಯಾಲಯ ನೀಡಲಿದೆ' ಎಂದು ಯಾದವ್ ತಿಳಿಸಿದರು.

               ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿ, ದೇವಾಲಯ ಮೂಲ ತಳಪಾಯದ ಮೇಲೆ 17ನೇ ಶತಮಾನದಲ್ಲಿ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ಹಿಂದೂ ಪರ ಅರ್ಜಿದಾರರ ವಾದವನ್ನು ಪುರಸ್ಕರಿಸಿದ್ದ ವಾರಾಣಸಿ ನ್ಯಾಯಾಲಯ, ಜಾಗದ ವೈಜ್ಞಾನಿಕ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries