HEALTH TIPS

ಬೇಕಲ್ ಫೆಸ್ಟ್-ಉದ್ಯಮ ಮೇಳ, ವಸ್ತುಪ್ರದರ್ಶನಕ್ಕೆ ಚಾಲನೆ

                    ಕಾಸರಗೋಡು: ಬೇಕಲ ಅಂತರಾಷ್ಟ್ರೀಯ ಬೀಚ್ ಉತ್ಸವದ ಅಂಗವಾಗಿ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಆಯೋಜಿಸಿರುವ ಕೈಗಾರಿಕಾ ಮತ್ತು ವಾಣಿಜ್ಯ ವಸ್ತು ಪ್ರದರ್ಶನ ಮತ್ತು ಮಾರುಕಟ್ಟೆ ಮೇಳ ಆರಂಭಗೊಮಡಿತು. ಮೇಳದಲ್ಲಿ ಜಿಲ್ಲೆಯ ವಿವಿಧ ಭಾಗಗಳ ಸಣ್ಣ ಕೈಗಾರಿಕೆಗಳ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತದೆ. ಆಹಾರ ಉತ್ಪನ್ನಗಳು, ಎಂಜಿನಿಯರಿಂಗ್ ಉತ್ಪನ್ನಗಳು, ಮನೆನಿರ್ಮಾಣ ಸಾಮಗ್ರಿಗಳು, ರೈಲ್ ಪ್ಲೇಟ್, ಪೀಠೋಪಕರಣ ಸೇರಿದಂತೆ ಪ್ಲಾಸ್ಟಿಕ್ ರಹಿತ ಉತ್ಪನ್ನಗಳ ವಿವಿಧ ಪ್ರದರ್ಶನಗಳಿಗಾಗಿ 32 ಮಳಿಗೆಗಳು ಕಾರ್ಯಾಚರಿಸುತ್ತಿದೆ.  ಕುಟುಂಬಶ್ರೀ ಆಹಾರ ಮಾರಾಟ ಮೇಳದ ಬಳಿ ಇರುವ ಕೈಗಾರಿಕಾ ಮತ್ತು ವಾಣಿಜ್ಯ ವಸ್ತುಪ್ರದರ್ಶನ ಮತ್ತು ಮಾರುಕಟ್ಟೆ ಮೇಳಕ್ಕೆ ರಾತ್ರಿ 11ರವರೆಗೆ ಸಾರ್ವಜನಿಕರು ಉಚಿತವಾಗಿ ಭೇಟಿ ನೀಡಬಹುದಾಗಿದೆ.

                ಮಾರುಕಟ್ಟೆ ಮೇಳವನ್ನು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಸಿ.ಎಚ್.ಕುಞಂಬು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಮೇಳವನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು  ವಸ್ತುಪ್ರದರ್ಶನ ಉದ್ಘಾಟಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕ ಕೆ.ಸಜಿತ್ ಕುಮಾರ್, ಆಡಳಿತ ಸಹಾಯಕ ಕೆ.ಆದಿಲ್ ಮುಹಮ್ಮದ್, ವ್ಯವಸ್ಥಾಪಕ ಕೆ.ಪಿ.ಸಜೀರ್ ಮೊದಲಾದವರು ಪಾಲ್ಗೊಂಡಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries