HEALTH TIPS

ಖಾಲಿಯಿರುವ ಹುದ್ದೆಗಳನ್ನು ತ್ವರಿತಗತಿಯಲ್ಲಿ ಭರ್ತಿ ಮಾಡಲಾಗುತ್ತಿದೆ: ಕೇಂದ್ರ

           ವದೆಹಲಿ: ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತ್ವರಿತಗತಿಯಲ್ಲಿ ಭರ್ತಿ ಮಾಡಲಾಗುತ್ತಿದೆ ಎಂದು ಲೋಕಸಭೆಗೆ ಬುಧವಾರ ಲಿಖಿತ ಉತ್ತರದ ಮೂಲಕ ತಿಳಿಸಲಾಯಿತು.

              ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ನೀಡಲು ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ದೇಶದಾದ್ಯಂತ 'ರೋಜಗಾರ್‌ ಮೇಳ'ಗಳನ್ನು ನಡೆಸಲಾಗುತ್ತಿದೆ.

             ಕೇಂದ್ರದ ಹಲವು ಸಚಿವಾಲಯಗಳು, ಇಲಾಖೆಗಳು, ಕೇಂದ್ರ ಸರ್ಕಾರದ ಸಾರ್ವಜನಿಕ ಕ್ಷೇತ್ರಗಳ ಉಪಕ್ರಮಗಳು (ಸಿಪಿಎಸ್‌ಯುಎಸ್‌) ಮತ್ತು ಆರೋಗ್ಯ, ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ವಲಯ ಬ್ಯಾಂಕ್‌ಗಳಂಥ ಸ್ವಾಯತ್ತ ಸಂಸ್ಥೆಗಳಲ್ಲಿ ಹೊಸ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಅವರು ತಿಳಿಸಿದರು.‌

             'ಉದ್ಯೋಗಸೃಷ್ಟಿಯ ಜೊತೆಗೆ ಯುವಜನರಲ್ಲಿ ಉದ್ಯೋಗಾರ್ಹತೆ ಉತ್ತಮಪಡಿಸುವುದೂ ಕೇಂದ್ರ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ವ್ಯಾಪಾರ ಉದ್ಯಮಕ್ಕೆ ಉತ್ತೇಜನ ನೀಡಲು ಆತ್ಮನಿರ್ಭರ ಪ್ಯಾಕೇಜ್‌ ಘೋಷಿಸಲಾಗಿದೆ ಎಂದು ಅವರು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries