ನವದೆಹಲಿ:ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು (ಡಿ.15) ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
0
samarasasudhi
ಡಿಸೆಂಬರ್ 15, 2023
ನವದೆಹಲಿ:ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು (ಡಿ.15) ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನಗಳು.
ಒಕ್ಕೂಟ ಭಾರತವನ್ನು ಕಟ್ಟಿದ ಉಕ್ಕಿನ ಮನುಷ್ಯ, ಸ್ವಾತಂತ್ರ್ಯ ಹೋರಾಟದ ಶಕ್ತಿ, ಮಹಾನ್ ವ್ಯಕ್ತಿ, ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ಸ್ಮರಣೆಯಂದು ಗೌರವ ನಮನಗಳು ಎಂದು ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರೀಯ ಏಕತೆಯ ಶಿಲ್ಪಿ, ನವಭಾರತದ ಉಕ್ಕಿನ ಮನುಷ್ಯ, ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಪುಣ್ಯತಿಥಿಯಂದು ಗೌರವ ನಮನಗಳು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.