ಮಂಜೇಶ್ವರ: ಕುಟುಂಬಗಳ ನೆಮ್ಮದಿ ಹಾಳು ಮಾಡುವ ಕುಡಿತ, ಮಾದಕ ದ್ರವ್ಯ ಸೇವನೆಯಂತಹ ಸಾಮಾಜಿಕ ಪಿಡುಗು ದೂರಮಾಡುವಲ್ಲಿ ಮದ್ಯವರ್ಜನ ಶಿಬಿರ ಸಹಕಾರಿ ಎಂದು ಕಾಸರಗೋಡು ಜನಜಾಗೃತಿ ವೇದಿಕೆ ಸದಸ್ಯ ಎಂ. ಮಂಜುನಾಥ್ ಆಳ್ವ ತಿಳಿಸಿದ್ದಾರೆ.
ಅವರು ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ 1766 ನೇ ಮದ್ಯವರ್ಜನ ಶಿಬಿರದಲ್ಲಿ ಆಯೋಜಿಸಲಾದ ಗಣ್ಯರ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೊಸಂಗಡಿ ಶ್ರೀ ಅಯ್ಯಪ್ಪ ಸ್ವಮಿ ಮಂದಿರ ಅಧ್ಯಕ್ಷ ಪದ್ಮನಾಭ ಕಡಪ್ಪರ, ಪುತ್ತೂರು ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಲೋಕೇಶ್ ಹೆಗಡೆ, ವೀರಭದ್ರ ಮಹಾಮಾಯಿ ದೇವಸ್ಥಾನದ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿಗಾರ್, ಬಂಗ್ರ ಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಯದುನಂದನ ಆಚಾರ್ಯ ಕಡಂಬಾರ್, ಕುಂಬಳೆ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಪುಣಿಯೂರ್, ಸಾಮಾಜಿಕ ಕಾರ್ಯಕರ್ತ ಪುಷ್ಪರಾಜ್ ಐಲ, ಜನಜಾಗೃತಿ ವೇದಿಕೆ ನಾರಾಯಣ ಮಾಟೆ, ನಿವೃತ್ತ ಮುಖ್ಯ ಶಿಕ್ಷಕ ಈಶ್ವರ ಮಾಸ್ಟರ್, ಜನಜಾಗೃತಿ ವೇದಿಕೆ ಕಾಸರಗೋಡು ಜಿಲ್ಲಾಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಜನಜಾಗೃತಿ ವೇದಿಕೆ ಸದಸ್ಯ ಪೆÇ್ರ. ಶ್ರೀನಾಥ್ ಕಾಸರಗೋಡು ಮೊದಲಾದವರು ುಪಸ್ಥಿತರಿದ್ದರು.
ಎಡನೀರು ಮೇಲ್ವಿಚಾರಕಿ ಸುನಿತ ಸ್ವಾಗತಿಸಿದರು. ಸುಂಕದಕಟ್ಟೆ ವಲಯದ ಮೇಲ್ವಿಚಾರಕ ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಮಲ್ಲಿಕಾ ವಂದಿಸಿದರು. ಬೆಳಗ್ಗೆ ಶ್ರೀ ಮಂಜುನಾಥ ನವ ಜೀವನ ಸಮಿತಿ ಪಾವಳ ಹಾಗೂ ಶ್ರೀ ಮಂಜುನಾಥ ನವಜೀವನ ಸಮಿತಿ ಮೀಂಜ ಸದಸ್ಯರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನ ಶಿಬಿರಾರ್ಥಿಗಳಿಗೆ ವ್ಯಕ್ತಪಡಿಸಿದರು. ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಯ್ಯರ್ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕಿ ಕೃಷ್ಣವೇಣಿ ಕೌಟುಂಬಿಕ ಸಲಹೆ ನೀಡಿದರು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಜ್ಞಾನವಿಕಾಸ ಕೇಂದ್ರಗಳು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸುಂಕದಕಟ್ಟೆ ವಲಯ ಸದಸ್ಯರಿಂದ ಕಾರ್ಯಕ್ರಮ ವೈವಿಧ್ಯ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಸುಂಕದಕಟ್ಟೆ ಹಾಗೂ ಶ್ರೀ ಮಹಾಲಿಂಗೇಶ್ವರ ಕುಣಿತ ಭಜನಾ ಸಂಘ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಶಿಬಿರಾಧಿಕಾರಿ ದೇವಿ ಪ್ರಸಾದ್ ಮೇಲ್ನೋಟದಲ್ಲಿ ಕಾರ್ಯಕ್ರಮ ನಡೆಯಿತು.


