HEALTH TIPS

ಚಂಡಮಾರುತ: ಆಂಧ್ರ, ತಮಿಳುನಾಡಿಗೆ ಮುಂಗಡವಾಗಿ ನೆರವು ಒದಗಿಸುವಂತೆ ಮೋದಿ ಸೂಚನೆ

            ವದೆಹಲಿ: ಮಿಚಾಂಗ್‌ ಚಂಡಮಾರುತದಿಂದ ತತ್ತರಿಸಿರುವ ತಮಿಳುನಾಡು ಹಾಗೂ ಆಂದ್ರ ಪ್ರದೇಶ ರಾಜ್ಯಗಳ ವಿಪತ್ತು ನಿರ್ವಹಣಾ ಪಡೆಗಳಿಗೆ (ಎಸ್‌ಡಿಆರ್‌ಎಫ್‌) ಕೇಂದ್ರದ ನೆರವನ್ನು ಮುಂಗಡವಾಗಿ ಒದಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವಾಲಯಕ್ಕೆ ಸೂಚಿಸಿದ್ದಾರೆ.

            ಈ ಮಾಹಿತಿಯನ್ನು ಹಂಚಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆಂಧ್ರ ಪ್ರದೇಶ ಎಸ್‌ಡಿಆರ್‌ಎಫ್‌ಗೆ ₹ 493.60 ಕೋಟಿ ಮತ್ತು ತಮಿಳುನಾಡು ಎಸ್‌ಡಿಆರ್‌ಎಫ್‌ಗೆ ₹ 450 ಕೋಟಿ ಬಿಡುಗಡೆ ಮಾಡುವಂತೆ ಪ್ರಧಾನಿ ನಿರ್ದೇಶಿಸಿದ್ದಾರೆ. ಕೇಂದ್ರವು ಮೊದಲ ಕಂತಿನಲ್ಲೂ ಇಷ್ಟೇ ಮೊತ್ತವನ್ನು ಬಿಡುಗಡೆ ಮಾಡಿದೆ ಎಂದಿದ್ದಾರೆ.

              ತಮ್ಮ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಶಾ, ರಾಷ್ಟ್ರೀಯ ವಿಪತ್ತು ನಿಯಂತ್ರಣ ನಿಧಿ (ಎನ್‌ಡಿಎಂಎಫ್‌) ಅಡಿಯಲ್ಲಿ ಚೆನ್ನೈನ ಜಲಾನಯನ ಪ್ರದೇಶಗಳಲ್ಲಿನ ಪ್ರವಾಹ ನಿರ್ವಹಣೆ ಚಟುವಟಿಕೆಗಳಿಗಾಗಿ ನಗರದ ಪ್ರವಾಹ ನಿಯಂತ್ರಣದ ಸಲುವಾಗಿನ ಮೊದಲ ಯೋಜನೆಗೂ ₹ 561.29 ಕೋಟಿ ಒದಗಿಸಲು ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

             ಚಂಡಮಾರುತವು ಉಭಯ ರಾಜ್ಯಗಳಲ್ಲಿ ಅಪಾರ ಹಾನಿಯನ್ನುಂಟುಮಾಡಿದೆ. ನಷ್ಟ ಪ್ರಮಾಣ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿರುವ ಅವರು, ಸಂತ್ರಸ್ತರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ. ಇಂತಹ ಕಠಿಣ ಸಂದರ್ಭದಲ್ಲಿ ನಾವೆಲ್ಲ ಅವರೊಂದಿಗೆ ಇದ್ದೇವೆ. ಸಾಧ್ಯವಾದಷ್ಟು ಬೇಗನೆ ಪರಿಸ್ಥಿತಿ ಸಹಜಸ್ಥಿತಿಗೆ ಮರಳಲಿದೆ ಎಂಬ ಭರವಸೆ ಇದೆ ಎಂದಿದ್ದಾರೆ.

              ಆಂಧ್ರ ಪ್ರದೇಶದಲ್ಲಿ ಚಂಡಮಾರುತದಿಂದಾಗಿ ಸುಮಾರು 770 ಕಿ.ಮೀ ರಸ್ತೆಗೆ ಹಾನಿಯಾಗಿದೆ. ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಸುಮಾರು 25 ಹಳ್ಳಿಗಳು ಮುಳುಗಡೆಯಾಗಿವೆ. ಎರಡು ಪಟ್ಟಣ ಮತ್ತು 194 ಹಳ್ಳಿಗಳ 40 ಲಕ್ಷ ಜನರು ತತ್ತರಿಸಿದ್ದಾರೆ.

ತಮಿಳುನಾಡು ರಾಜಧಾನಿ ಚೆನ್ನೈನ ಹಲವು ಪ್ರದೇಶಗಳು ಜಲಾವೃತವಾಗಿವೆ. ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ತಮಿಳುನಾಡು ಸರ್ಕಾರ ಕೇಂದ್ರದಿಂದ ಈಗಾಗಲೇ ₹ 5,060 ಕೋಟಿ ನೆರವು ಕೋರಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries