ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲು ಭಜನ್ ಲಾಲ್ ಅವರು ನಿವಾಸಕ್ಕೆ ತೆರಳಿ ತಂದೆ- ತಾಯಿಗಳ ಆಶೀರ್ವಾದ ಪಡೆದರು. ಜತೆಗೆ ಜೈಪುರದ ದೇವಸ್ಥಾನವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದರು.