ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ವಿಪಕ್ಷಗಳ 15 ಸಂಸದರನ್ನು ಅಮಾನತು ಮಾಡಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದಿದ್ದಾರೆ.
0
samarasasudhi
ಡಿಸೆಂಬರ್ 15, 2023
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ವಿಪಕ್ಷಗಳ 15 ಸಂಸದರನ್ನು ಅಮಾನತು ಮಾಡಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 'ಭದ್ರತಾ ವೈಫಲ್ಯದ ಕುರಿತು ಸರ್ಕಾರವನ್ನು ಪ್ರಶ್ನಿಸಿದ ಸಂಸದರನ್ನೇ ಅಮಾನತು ಮಾಡುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ.
'ಒಂದು ಕಡೆ ಪ್ರಶ್ನೆ ಮಾಡಿದ ಸಂಸದರನ್ನು ಅಮಾನತುಗೊಳಿಸಲಾಗಿದೆ. ಮತ್ತೊಂದು ಕಡೆ ಆಗಂತುಕನಿಗೆ ಪಾಸ್ ನೀಡಲು ಸಹಕರಿಸಿದ್ದ ಸಂಸದನ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪ್ರಜಾಪ್ರಭುತ್ವವನ್ನು ನಿರ್ದಯವಾಗಿ ಬಲಿಕೊಡಲಾಗುತ್ತಿದೆ' ಎಂದು ಹೇಳಿದರು.
ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷಗಳ 15 ಸಂಸದರನ್ನು ಇಂದು ಅಮಾನತು ಮಾಡಲಾಗಿದೆ. ಸದನದ ಬಾವಿಗೆ ಇಳಿದು ಅಶಿಸ್ತಿನ ನಡವಳಿಕೆ ತೋರಿದ ಆರೋಪದ ಮೇಲೆ ಟಿಎಂಸಿ ಸಂಸದ ಡೆರೆಕ್ ಒಬ್ರಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ. ಉಳಿದ 14 ಸಂಸದರನ್ನು(ಕಾಂಗ್ರೆಸ್‌ನಿಂದ 9, ಡಿಎಂಕೆಯಿಂದ ಒಬ್ಬರು) ಲೋಕಸಭೆಯಿಂದ ಅಮಾನತು ಮಾಡಲಾಗಿದೆ.