HEALTH TIPS

ಸಂಸತ್ ಭದ್ರತಾ ಲೋಪ | ಆರೋಪಿಗಳು ಬಳಕೆ ಮಾಡಿದ್ದ ಫೋನ್ ಸುಟ್ಟ ಸ್ಥಿತಿಯಲ್ಲಿ ಪತ್ತೆ

              ವದೆಹಲಿ: ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಗಳು ಬಳಕೆ ಮಾಡಿದ್ದ ಫೋನ್, ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

                ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ', ಚಿತ್ರ ಸಮೇತ ಪೋಸ್ಟ್ ಮಾಡಿದೆ.

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಸಂಚುಕೋರ ಲಲಿತ್ ಝಾ, ಆರೋಪಿಗಳ ಫೋನ್ ಇರಿಸಿಕೊಂಡಿದ್ದರು ಎನ್ನಲಾಗಿದೆ.


                ಬಳಿಕ ಇದನ್ನು ನಾಶಪಡಿಸಿರಬಹುದು ಎಂದು ಅಂದಾಜಿಸಲಾಗಿದೆ.

ತನಿಖೆ ವೇಳೆಯಲ್ಲಿ ರಾಜಸ್ಥಾನದಲ್ಲಿ ಆರೋಪಿಗಳು ಬಳಕೆ ಮಾಡಿದ್ದ ಫೋನ್‌ಗಳ ಬಿಡಿಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

          ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಗಿತ್ತು. ಡಿಸೆಂಬರ್ 13ರಂದು ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ 'ಸ್ಮೋಕ್ ಕ್ಯಾನ್' (ಹಳದಿ ಬಣ್ಣದ ಹೊಗೆ) ಹಾರಿಸಿ ದಾಂಧಲೆ ಎಬ್ಬಿಸಿದ್ದರು. ಇದೇ ಸಮಯದಲ್ಲಿ ಸಂಸತ್‌ನ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು.

                  ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries