ತ್ರಿಶೂರ್: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕೆಪಿ ವಿಶ್ವನಾಥನ್ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 9.35ರ ಸುಮಾರಿಗೆ ಮೃತಪಟ್ಟಿದ್ದಾರೆ. ತ್ರಿಶೂರ್‍ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಪಿ ವಿಶ್ವನಾಥನ್ ಅವರು ತ್ರಿಶೂರ್‍ನ ಅತ್ಯಂತ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದರು. ಯುಡಿಎಫ್ ಸರ್ಕಾರದ ಅವಧಿಯಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.


