ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂದು ಎಂಡಿಎಂಕೆ ನಾಯಕ ವೈಕೊ ಹೇಳಿದ್ದಾರೆ.
0
samarasasudhi
ಡಿಸೆಂಬರ್ 20, 2023
ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂದು ಎಂಡಿಎಂಕೆ ನಾಯಕ ವೈಕೊ ಹೇಳಿದ್ದಾರೆ.
ಆದಾಗ್ಯೂ, ಮೊದಲು ಲೋಕಸಭೆ ಗೆಲ್ಲುವುದು ಮುಖ್ಯ ನಂತರ ಎಲ್ಲವನ್ನೂ ನಿರ್ಧರಿಸಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ವರದಿಯಾಗಿದೆ.
ಇಂಡಿಯಾ ಮೈತ್ರಿಕೂಟದ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವೈಕೊ ಅವರು, ಖರ್ಗೆ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಮತ್ತು ಕೇಜ್ರಿವಾಲ್ ಪ್ರಸ್ತಾಪ ಮಾಡಿದರು. ಆದರೆ ಸಭೆಯಲ್ಲಿ ಅಂತಿಮವಾಗಿ ಯಾವುದೇ ತೀರ್ಮಾನವಾಗಲಿಲ್ಲ ಎಂದು ಹೇಳಿದರು.
ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ 28 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ದೇಶದ ಮೊದಲ ದಲಿತ ಪ್ರಧಾನಿಯಾಗಲು ತಮ್ಮ ಹೆಸರನ್ನು ಪ್ರಸ್ತಾಪಿಸಿದ ನಂತರ ಮಾತನಾಡಿದ ಖರ್ಗೆ, 'ಮೊದಲು ಗೆಲ್ಲೋಣ, ನಂತರ ನೋಡೋಣ. ನಾನು ದೀನದಲಿತರಿಗಾಗಿ ಕೆಲಸ ಮಾಡುತ್ತೇನೆ, ಏನನ್ನೂ ಬಯಸುವುದಿಲ್ಲ' ಎಂದರು.
ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಖರ್ಗೆ, 'ಮೊದಲು ನಾವು ಗೆಲ್ಲಬೇಕು ಮತ್ತು ಬಹುಮತ ಪಡೆಯಬೇಕು, ನಂತರ ಸಂಸದರು ಪ್ರಜಾಸತ್ತಾತ್ಮಕವಾಗಿ ನಿರ್ಧರಿಸುತ್ತಾರೆ ಎಂದು ಖರ್ಗೆ ಹೇಳಿದರು.