HEALTH TIPS

ವಿಚ್ಛೇದನ ಪಡೆಯಲು ಒಮರ್ ಅಬ್ದುಲ್ಲಾಗೆ ಅನುಮತಿ ನಿರಾಕರಿಸಿದ ದೆಹಲಿ ಹೈಕೋರ್ಟ್‌

            ವದೆಹಲಿ: ತಮ್ಮಿಂದ ದೂರ ಇರುವ ಪತ್ನಿಯಿಂದ ವಿಚ್ಛೇದನ ಕೋರಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ. ಅವರ ಕೋರಿಕೆಯಲ್ಲಿ ಯಾವುದೇ ಮಾನ್ಯತೆ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

               ನ್ಯಾಯಮೂರ್ತಿಗಳಾದ ಸಂಜೀವ್ ಸಚ್‌ದೇವ ಹಾಗೂ ವಿಕಾಸ್ ಮಹಾಜನ್ ಅವರಿದ್ದ ಪೀಠ ಒಮರ್ ಅಬ್ದುಲ್ಲಾ ಅವರಿಗೆ ವಿಚ್ಛೇದನ ನೀಡಲು ನಿರಾಕರಿಸಿ, ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿಯಿತು.

              2016ರ ಆಗಸ್ಟ್ 30ರಂದು ಕೆಳ ನ್ಯಾಯಾಲಯವು ವಿಚ್ಛೇದನ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಒಮರ್ ಹೈಕೋರ್ಟ್‌ ಮೆಟ್ಟಿಲೇರಿದ್ದರು.

            ಪತ್ನಿ ಪಾಯಲ್ ಅಬ್ದುಲ್ಲಾರಿಂದ ತಾನು ದೌರ್ಜನ್ಯಕ್ಕೊಳಗಾಗಿದ್ದು, ಹೀಗಾಗಿ ವಿಚ್ಛೇದನಕ್ಕೆ ಅನುಮತಿಸಬೇಕು ಎಂದು ಒಮರ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

                'ಒಮರ್ ಅಬ್ದುಲ್ಲಾ ಮಾಡಿರುವ ಕ್ರೌರ್ಯದ ಆರೋಪಗಳು ಅಸ್ಪಷ್ಟವಾಗಿದೆ ಮತ್ತು ಸ್ವೀಕಾರಾರ್ಹವಲ್ಲ ಎಂದು ಕೌಟುಂಬಿಕ ವ್ಯಾಜ್ಯಗಳ ನ್ಯಾಯಾಲಯ ತೆಗೆದುಕೊಂಡ ನಿರ್ಣಯದಲ್ಲಿ ಯಾವುದೇ ದೋಷ ಕಾಣಿಸುತ್ತಿಲ್ಲ. ಮಾನಸಿಕವಾಗಿ ಅಥವಾ ದೈಹಿಕವಾಗಿ ಕ್ರೌರ್ಯದ ಕ್ರಿಯೆ ಎಂದು ಕರೆಯಬಹುದಾದದ ಯಾವುದೇ ಕೃತ್ಯವನ್ನು ಸಾಬೀತುಪಡಿಸಲು ಅರ್ಜಿದಾದರು ವಿಫಲರಾಗಿದ್ದಾರೆ' ಎಂದು ಕೋರ್ಟ್ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries