ತಿರುವನಂತಪುರಂ: ಶಬರಿಮಲೆಯಲ್ಲಿ ಜನದಟ್ಟಣೆ ಹೆಚ್ಚಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪರಿಶೀಲನಾ ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಪರಿಶೀಲನಾ ಸಭೆ ನಡೆಯಲಿದೆ.
ಸಭೆಯು ಆನ್‍ಲೈನ್‍ನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ ಭಾಗವಹಿಸಲಿದ್ದಾರೆ. ಮುಖ್ಯ ಕಾರ್ಯದರ್ಶಿ, ದೇವಸ್ವಂ ಮಂಡಳಿ ಅಧ್ಯಕ್ಷರು, ಆಯುಕ್ತರು, ರಾಜ್ಯ ಪೆÇಲೀಸ್ ಮುಖ್ಯಸ್ಥರು ಮುಂತಾದವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾನನಪಥದಲ್ಲಿ, ಪ್ರತಿ ನೆಲೆಯಲ್ಲಿ ಭಕ್ತರನ್ನು ನಿಯಂತ್ರಿಸಲಾಗುತ್ತದೆ ಮತ್ತು ಸನ್ನಿಧಾನದ ದಟ್ಟಣೆಗೆ ಅನುಗುಣವಾಗಿ ಹಾದುಹೋಗಲು ಅವಕಾಶ ನೀಡಲಾಗುತ್ತದೆ. ಭದ್ರತೆ, ನೀರು ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಖಚಿತಪಡಿಸಿಕೊಳ್ಳಲು ಡ್ಯೂಟಿ ಮ್ಯಾಜಿಸ್ಟ್ರೇಟ್ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನೇತೃತ್ವದ ಕಂದಾಯ ಸ್ಕ್ವಾಡ್ ಅನ್ನು ಸಹ ವಿಶೇಷವಾಗಿ ಸ್ಥಾಪಿಸಲಾಗಿದೆ.
ಶಬರಿಮಲೆಯಲ್ಲಿ ಜನಸಂದಣಿ ನಿಯಂತ್ರಿಸಲು ಹೈಕೋರ್ಟ್ ಕೂಡ ಮಧ್ಯಪ್ರವೇಶ ಮಾಡಿತ್ತು.ನಂತರ ಸನ್ನಿಧಾನಂನಲ್ಲಿ ಜನಸಂದಣಿ ನಿಯಂತ್ರಿಸುವ ವೇಳೆಗೆ ನಿಲ್ದಾಣದಲ್ಲಿ ಜನಜಂಗುಳಿ ಮುಂದುವರಿದಿತ್ತು.





