HEALTH TIPS

ತೆಲಂಗಾಣದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ: ಸಂಸತ್‌ನಲ್ಲಿ ಮಸೂದೆ ಅಂಗೀಕಾರ

             ವದೆಹಲಿ: ತೆಲಂಗಾಣದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಆರಂಭಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಸಂಸತ್ತು ಬುಧವಾರ ಅಂಗೀಕರಿಸಿದೆ.

              ಈ ಮಸೂದೆಗೆ ಲೋಕಸಭೆಯು ಕಳೆದ ವಾರ ಅಂಗೀಕಾರ ನೀಡಿತ್ತು. ಸಂಸತ್ತಿನಲ್ಲಿ ಭದ್ರತಾ ಲೋಪ ಆಗಿರುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದ್ದ ಸಂದರ್ಭದಲ್ಲಿ, ರಾಜ್ಯಸಭೆಯು ಈ ಮಸೂದೆಗೆ ಬುಧವಾರ ಧ್ವನಿಮತದ ಮೂಲಕ ಅಂಗೀಕಾರ ನೀಡಿತು.

               ಆಂಧ್ರಪ್ರದೇಶ ಮರುವಿಂಗಡಣೆ ಕಾಯ್ದೆ 2014ರ ಅನ್ವಯ, ತೆಲಂಗಾಣದಲ್ಲಿ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸಲೇಬೇಕಿದೆ ಎಂದು ವಿಶ್ವವಿದ್ಯಾಲಯ ಕುರಿತ ಮಸೂದೆ ಮೇಲಿನ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries