ರಾಜಗಢ: 25 ಅಡಿ ಆಳದ ಕೊಳವೆ ಬಾವಿಯೊಳಗೆ ಸಿಲುಕಿಕೊಂಡಿದ್ದ ನಾಲ್ಕು ವರ್ಷದ ಬಾಲಕಿ ರಕ್ಷಿಸಿದ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಮಧ್ಯಪ್ರದೇಶ | ಕೊಳವೆ ಬಾವಿಯಿಂದ ರಕ್ಷಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು
0
December 06, 2023
Tags
ರಾಜಗಢ: 25 ಅಡಿ ಆಳದ ಕೊಳವೆ ಬಾವಿಯೊಳಗೆ ಸಿಲುಕಿಕೊಂಡಿದ್ದ ನಾಲ್ಕು ವರ್ಷದ ಬಾಲಕಿ ರಕ್ಷಿಸಿದ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಪಿಪ್ಲಿಯಾ ರಸೋಡಾ ಗ್ರಾಮದ ಬಾಲಕಿ ಮಹಿ ಮಂಗಳವಾರ ಸಂಜೆ 5.30ರ ಸುಮಾರಿಗೆ ಕೊಳವೆ ಬಾವಿಗೆ ಬಿದ್ದಿದ್ದಳು.
ಬಾಲಕಿಯ ಸ್ಥಿತಿ ಗಂಭೀರವಾಗಿದ್ದರಿಂದ ಪಚೋರ್ನಿಂದ ಭೋಪಾಲ್ನ ಹಮಿಡಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರೋಗ್ಯ ಅಧಿಕಾರಿ ಡಾ.ಕಿರಣ್ ವಾಡಿಯಾ ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಬಾಲಕಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.