ಕೊಚ್ಚಿ: ಮುಂದಿನ ಶೈಕ್ಷಣಿಕ ವರ್ಷದಿಂದ ಲಕ್ಷದ್ವೀಪದ ಶಾಲೆಗಳು ಇಂಗ್ಲಿಷ್ ಮಾಧ್ಯಮಕ್ಕೆ ಬದಲಾಗಲಿವೆ. ಇದರೊಂದಿಗೆ ಕೇರಳದ ಪಠ್ಯಕ್ರಮವನ್ನು ಶಾಲೆಗಳಿಂದ ತೆಗೆದುಹಾಕಲಾಗುತ್ತದೆ ಮತ್ತು ಅರೇಬಿಕ್ ಅಧ್ಯಯನವೂ ಕಣ್ಮರೆಯಾಗಲಿದೆ.
ಈ ಸಂಬಂಧ ಲಕ್ಷದ್ವೀಪ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಮುಂದಿನ ವಷರ್ದಿಂದ ಪ್ರಥಮ ದರ್ಜೆ ಪ್ರವೇಶವನ್ನು ಸಿಬಿಎಸ್‍ಇ ಆಂಗ್ಲ ಮಾಧ್ಯಮದಲ್ಲಿ ಮಾತ್ರ ನಡೆಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇಂಗ್ಲಿಷ್ ಮಾಧ್ಯಮಕ್ಕೆ ಬದಲಾಯಿಸುವ ಮುಖ್ಯ ಉದ್ದೇಶ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದಾಗಿದೆ. ಇದು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಬಹುದು. ಇದೇ ವೇಳೆ 9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಳೆಯ ಪಠ್ಯಕ್ರಮವನ್ನೇ ಅನುಸರಿಸಲಿದ್ದಾರೆ. ವಿದ್ಯಾರ್ಥಿಗಳು ಮಲಯಾಳಂ ಅನ್ನು ಐಚ್ಛಿಕ ವಿಷಯವಾಗಿ ಅಧ್ಯಯನ ಮಾಡಬಹುದು.


