HEALTH TIPS

ಒಂದೇ ವರ್ಷದಲ್ಲಿ ಸಾವಿರ ಕೋಟಿ ಮೌಲ್ಯದ ಜೆನೆರಿಕ್‌ ಔಷಧ ಮಾರಾಟ

             ವದೆಹಲಿ: ಪ್ರಸಕ್ತ ವರ್ಷದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (ಪಿಎಂಬಿಜೆಪಿ) ಅಡಿಯಲ್ಲಿ ₹1 ಸಾವಿರ ಕೋಟಿ ಮೌಲ್ಯದ ಜೆನೆರಿಕ್‌ ಔಷಧಗಳನ್ನು ಮಾರಾಟ ಮಾಡಿ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

           ದೇಶದ 785 ಜಿಲ್ಲೆಗಳಲ್ಲಿ ಇರುವ ಜೆನೆರಿಕ್‌ ಕೇಂದ್ರಗಳಲ್ಲಿ ಔಷಧ ಖರೀದಿಸುವ ಮೂಲಕ ಜನರು ಈ ವರ್ಷದಲ್ಲಿ ಸುಮಾರು ₹5 ಸಾವಿರ ಕೋಟಿ ಉಳಿತಾಯ ಮಾಡಿದ್ದಾರೆ ಎಂದು ತಿಳಿಸಿದೆ.

              2014ರಲ್ಲಿ ದೇಶದಲ್ಲಿ ಕೇವಲ 80 ಕೇಂದ್ರಗಳಿದ್ದವು. ಸದ್ಯ ಇವುಗಳ ಸಂಖ್ಯೆ 10 ಸಾವಿರಕ್ಕೇರಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಈ ಯೋಜನೆಯಡಿ ಔಷಧ ಖರೀದಿಸುವ ಮೂಲಕ ಜನರು ₹25 ಸಾವಿರ ಕೋಟಿ ಉಳಿತಾಯ ಮಾಡಿದ್ದಾರೆ ಎಂದು ವಿವರಿಸಿದೆ.

              2026ರ ಮಾರ್ಚ್‌ ಅಂತ್ಯದ ವೇಳೆಗೆ ದೇಶದಲ್ಲಿ ಜೆನೆರಿಕ್‌ ಕೇಂದ್ರಗಳ ಸಂಖ್ಯೆಯನ್ನು 25 ಸಾವಿರಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಹೊಸ ಕೇಂದ್ರಗಳ ಸ್ಥಾಪನೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿಯನ್ನೂ ಆಹ್ವಾನಿಸಲಾಗಿದೆ ಎಂದು ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries