ಪಾಲಕ್ಕಾಡ್: ಪಾಲಕ್ಕಾಡ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಸಮಾಜ ವಿರೋಧಿಗಳ ದಾಳಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ.
ಮೆಡಿಕಲ್ ಕಾಲೇಜು ಆವರಣದಲ್ಲಿ ದುಷ್ಕರ್ಮಿಗಳ ಗುಂಪೊಂದು ವಿದ್ಯಾರ್ಥಿಗಳನ್ನು ಥಳಿಸಿದೆ ಎಂದು ವರದಿಯಾಗಿದೆ.
ದಾಳಿಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಸೌತ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯಲ್ಲಿ ನಾಲ್ವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.


