ನವದೆಹಲಿ: ಉಪ ರಾಷ್ಟ್ರಪತಿಯೂ ಆಗಿರುವ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರ ಬಗ್ಗೆ ಅಣಕವಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಇದನ್ನು ವಿಡಿಯೊ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಜಾಟ್ ಮಹಾಸಭಾದ ಸದಸ್ಯರು ಒತ್ತಾಯಿಸಿದ್ದಾರೆ.
0
samarasasudhi
ಡಿಸೆಂಬರ್ 22, 2023
ನವದೆಹಲಿ: ಉಪ ರಾಷ್ಟ್ರಪತಿಯೂ ಆಗಿರುವ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರ ಬಗ್ಗೆ ಅಣಕವಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಇದನ್ನು ವಿಡಿಯೊ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತ ಜಾಟ್ ಮಹಾಸಭಾದ ಸದಸ್ಯರು ಒತ್ತಾಯಿಸಿದ್ದಾರೆ.
ಮಂಗಳವಾರ ಸಂಸದರ ಅಮಾನತು ವಿರೋಧಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬ್ಯಾನರ್ಜಿ ಅವರು ಧನಕರ್ ಅವರನ್ನು ಕುರಿತಂತೆ ಅಣಕ ಮಾಡಿದ್ದರು. ಇವರನ್ನು ರಾಹುಲ್ ಅವರು ತಮ್ಮ ಮೊಬೈಲ್‌ನಲ್ಲಿ ವಿಡಿಯೊ ಮಾಡುತ್ತಿದ್ದುದು ಕಂಡು ಬಂದಿತ್ತು.
ಈ ಇಬ್ಬರು ಸಂಸದರ ವಿರುದ್ಧ ಘೋಷಣೆ ಕೂಗಿ ಕ್ರಮಕ್ಕೆ ಒತ್ತಾಯಿಸಿದ ಪ್ರತಿಭಟನಕಾರರು ಸತತ ಎರಡನೇ ದಿನ ಗುರುವಾರವೂ ಪ್ರತಿಭಟನೆ ನಡೆಸಿದರು. ಬುಧವಾರ ಕಾಂಗ್ರೆಸ್ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು.
ಜಂತರ್‌ಮಂತರ್ ಬಳಿ ಪ್ರತಿಭಟನೆ ನಡೆಸಿದ ವೇಳೆ ಜಾಟ್ ಸಮುದಾಯದ ರಾಷ್ಟ್ರೀಯ ಕಾರ್ಯದರ್ಶಿ ಅಶೋಕ್ ಬಲ್ಯಾನ್ ಮಾತನಾಡಿ, ರಾಹುಲ್ ಗಾಂಧಿ ಮತ್ತು ಬ್ಯಾನರ್ಜಿ ಅವರನ್ನು ಸಂಸತ್ತಿನಿಂದ ಶಾಶ್ವತವಾಗಿ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.