HEALTH TIPS

ಜಪಾನ್‌ ಭೂಕಂಪ: ಮೃತರ ಸಂಖ್ಯೆ 100ಕ್ಕೇರಿಕೆ, 200ಕ್ಕೂ ಅಧಿಕ ಮಂದಿ ನಾಪತ್ತೆ

              ವಾಜಿಮಾ: ಹೊಸ ವರ್ಷದ ಮೊದಲ ದಿನ (ಸೋಮವಾರ) ಜಪಾನ್‌ನ ಪಶ್ಚಿಮ ಭಾಗದ ಕರಾವಳಿಯಲ್ಲಿ ಸರಣಿ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದ್ದು, 200ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

             ಭೂಕಂಪದ ತೀವ್ರತೆ ಒಂದು ಬಾರಿ ರಿಕ್ಟರ್‌ ಮಾಪನದಲ್ಲಿ 7.6ರಷ್ಟು ದಾಖಲಾಗಿದೆ.

ಅವಘಡದಲ್ಲಿ ಭಾರಿ ಪ್ರಮಾಣದಲ್ಲಿ ಆಸ್ತಿ ನಷ್ಟವಾಗಿದೆ. ಕುಸಿದ ಕಟ್ಟಡಗಳಡಿ ಸಿಲುಕಿರುವವರ ರಕ್ಷಣೆಗೆ ಶೋಧ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ದ್ವೀಪ ಪ್ರದೇಶ ಹೊನ್ಶುವಿನ ಇಶಿಕಾವಾ ವಲಯದಲ್ಲಿ ಭೂಕಂಪದ ತೀವ್ರತೆಯು ಹೆಚ್ಚಾಗಿದೆ. ಬಹುಮಹಡಿ ಕಟ್ಟಡ ಸೇರಿದಂತೆ ಹಲವು ಮನೆಗಳು ಉರುಳಿವೆ. ಹೆಚ್ಚಿನ ರಸ್ತೆಗಳು ಬಿರುಕುಬಿಟ್ಟಿವೆ. ಅಲ್ಲಲ್ಲಿ ಬೆಂಕಿ ಅವಘಡಗಳು ವರದಿಯಾಗಿದ್ದವು.

               ಇದುವರೆಗೆ 100 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಆದರೆ, ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗಾಗಿ ಶೋಧ ಕಾರ್ಯ ಚುರುಕಿನಿಂದ ಸಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries