ಎರ್ನಾಕುಳಂ: ಗರ್ಭಪಾತಕ್ಕೆ ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ 12 ವರ್ಷದ ಬಾಲಕಿಯ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಭ್ರೂಣದ ಬೆಳವಣಿಗೆಯನ್ನು ಉಲ್ಲೇಖಿಸಿ ಗರ್ಭಪಾತದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಭ್ರೂಣವು 34 ವಾರಗಳಾಗಿದ್ದು, ಪೂರ್ಣ ಬೆಳವಣಿಗೆಯನ್ನು ತಲುಪಿದೆ ಎಂದು ಹೈಕೋರ್ಟ್ ಹೇಳಿದೆ. ಈ ಸಮಯದಲ್ಲಿ ಗರ್ಭಪಾತ ಮಾಡಿಸುವುದು ಬಾಲಕಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಕೋರ್ಟ್ ಉಲ್ಲೇಖಿಸಿದೆ.
ಕಳೆದ ತಿಂಗಳು ಬಾಲಕಿ ಗರ್ಭಪಾತಕ್ಕೆ ಅನುಮತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಳು. ಬಾಲಕಿ ತನ್ನ ಅಪ್ರಾಪ್ತ ಸಹೋದರನೊಂದಿಗೆ ಸಂಭೋಗಗೈದು ಗರ್ಭಿಣಿಯಾಗಿದ್ದಳು.





