ಮುಂಬೈ: ಮಹಾರಾಷ್ಟ್ರದ ಸೋಲಾಪುರದಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ (ಪಿಎಂವೈ-ಯು) ನಿರ್ಮಿಸಲಾದ 15,204 ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಫಲಾನುಭವಿಗಳಿಗೆ ಹಸ್ತಾಂತರಿಸಿದರು.
0
samarasasudhi
ಜನವರಿ 19, 2024
ಮುಂಬೈ: ಮಹಾರಾಷ್ಟ್ರದ ಸೋಲಾಪುರದಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ (ಪಿಎಂವೈ-ಯು) ನಿರ್ಮಿಸಲಾದ 15,204 ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಫಲಾನುಭವಿಗಳಿಗೆ ಹಸ್ತಾಂತರಿಸಿದರು.
ಇದೇ ವೇಳೆ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ ಶಿಂದೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್, ಅಜಿತ್ ಪವಾರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
'ಅಮೃತ್ 2.0' ಯೋಜನೆ ಉದ್ಘಾಟಿಸಿದ ಮೋದಿ
ಪಟ್ಟಣದಲ್ಲಿನ ಪ್ರತಿಮನೆಗೂ ನಲ್ಲಿ ನೀರು ಒದಗಿಸುವ ಕೇಂದ್ರ ಸರ್ಕಾರದ 'ಅಮೃತ್ 2.0' ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು 'ಅಮೃತ್ 2.0' ಯೋಜನೆಯನ್ನು 2021ರ ಅಕ್ಟೋಬರ್ 2ರಂದು ಪ್ರಕಟಿಸಿದ್ದರು.