HEALTH TIPS

ನಿರುದ್ಯೋಗ ಸಮಸ್ಯೆಯು ಕೋವಿಡ್‌-19ರ ಪರಿಸ್ಥಿತಿಗಿಂತ ಕೆಟ್ಟದಾಗಿದೆ: ಕಾಂಗ್ರೆಸ್‌

              ವದೆಹಲಿ: ದೇಶದಲ್ಲಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್‌ ಗುರುವಾರ ಆರೋಪಿಸಿದೆ.

           'ನಿರುದ್ಯೋಗ ಸಮಸ್ಯೆಯು ಕೋವಿಡ್‌-19ರ ಸಾಂಕ್ರಾಮಿಕ ರೋಗದ ಸಮಯದಲ್ಲಿದ್ದ ಪರಿಸ್ಥಿತಿಗಿಂತ ಕೆಟ್ಟದಾಗಿದೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಭಾರತದ ಯುವಜನರು ಉದ್ಯೋಗಾವಕಾಶ ಪಡೆಯಲು ಅರ್ಹರು ಎಂದಿದ್ದಾರೆ.

             ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿಅಂಶಗಳ ಪ್ರಕಾರ, 25 ರಿಂದ 29 ವರ್ಷ ವಯಸ್ಸಿನ ಯುವಜನತೆಯು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಈ ಪ್ರಮಾಣ ಅತಿ ಹೆಚ್ಚಾಗಿದೆ.

              20 ರಿಂದ 24 ವರ್ಷ ವಯಸ್ಸಿನ ಯುವಜನತೆಯ ನಿರುದ್ಯೋಗ ಪ್ರಮಾಣವು ಶೇಕಡಾ 45.5ರಷ್ಟಿದೆ ಎಂದಿದ್ದಾರೆ.

                30 ರಿಂದ 34 ವರ್ಷದೊಳಗಿನವರ ನಿರುದ್ಯೋಗ ಪ್ರಮಾಣ ಮೂರು ವರ್ಷಗಳಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

               ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಅವಕಾಶಗಳು ಸಿಗದೇ ಹೆಚ್ಚಿನ ಕುಟುಂಬಗಳು ನರೇಗಾ ಯೋಜನೆ ಅಡಿಯಲ್ಲಿ ಬರುವ ಕೆಲಸಗಳಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries