ಕಾಸರಗೋಡು : ಹದಿನೈದರಿಂದ 29 ವರ್ಷದೊಳಗಿನ ಯುವಜನತೆಗೆ ನೆಹರು ಯುವ ಕೇಂದ್ರ ಎರ್ನಾಕುಲಂ ವತಿಯಿಂದ 'ಮೈ ಭಾರತ್ ವಿಕಸಿತ್ ಭಾರತ್ @2047' ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ.
ಜಿಲ್ಲಾ ಮಟ್ಟದ ಸ್ಪರ್ಧೆಯು ಜನವರಿ 10 ರಂದು ಮಧ್ಯಾಹ್ನ 2 ಗಂಟೆಗೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಲಿದೆ. ಸ್ಪರ್ಧಿಗಳು ಮಧ್ಯಾಹ್ನ 1 ಗಂಟೆಗೆ ಸಭಾಂಗಣಕ್ಕೆ ಹಾಜರಾಗಬೇಕು. ಜಿಲ್ಲಾ ಮಟ್ಟದ ವಿಜೇತರಿಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ರಾಜ್ಯ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ಕ್ರಮವಾಗಿ ರೂ.1 ಲಕ್ಷ, ರೂ.50,000 ಮತ್ತು ರೂ.25,000 ನಗದು ಬಹುಮಾನ ನೀಡಲಾಗುವುದು. ಜಿಲ್ಲಾ ಮಟ್ಟದ ವಿಜೇತರಿಗೆ ಯಾವುದೇ ಬಹುಮಾನ ಇರುವುದಿಲ್ಲ. ಮಲಯಾಳಂ, ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಲ್ಲಿ ಸ್ಪರ್ಧಿಸಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ (7736426247 ಮತ್ತು 8136921959) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


